ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ಅಗ್ನಿ ದುರಂತ: ಸಾವಿನ ಸಂಖ್ಯೆ 43ಕ್ಕೆ ಏರಿಕೆ, ಪ್ರಧಾನಿ ಮೋದಿ ಸಂತಾಪ

Last Updated 8 ಡಿಸೆಂಬರ್ 2019, 5:24 IST
ಅಕ್ಷರ ಗಾತ್ರ

ನವದೆಹಲಿ: ಭಾನುವಾರ ಬೆಳ್ಳಂಬೆಳಗ್ಗೆ ದೆಹಲಿಯ ರಾಣಿ ಜಾನ್ಸಿ ರಸ್ತೆಯಲ್ಲಿರುವ ಅನಾಜ್‌ಮಂಡಿಪ್ರದೇಶದ ಮೂರು ಮಹಡಿ ಕಟ್ಟಡದ ಕಾರ್ಖಾನೆಯಲ್ಲಿ ಅಗ್ನಿ ದುರಂತ ಸಂಭವಿಸಿದ್ದು, 43ಮಂದಿ ಮೃತಪಟ್ಟಿದ್ದಾರೆ.

ನಸುಕಿನ 5 ‌ಗಂಟೆ ಸುಮಾರಿಗೆಅವಘಡ ಸಂಭವಿಸಿದೆ.ಕಟ್ಟಡದೊಳಗೆ ಇನ್ನು ಹಲವು ಮಂದಿ ಸಿಲುಕಿದ್ದು, ಇದುವರೆಗೆ 50ಕ್ಕೂ ಹೆಚ್ಚು ಮಂದಿಯನ್ನು ಅಗ್ನಿ ಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಹಾಗೂ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಗಾಯಾಳುಗಳನ್ನು ಆರ್‌ಎಂಎಲ್‌, ಹಿಂದೂ ರಾವ್‌ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಘಟನೆ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ದೆಹಲಿಯ ಅನಾಜ್‌ ಮಂಡಿ ಪ್ರದೇಶದಲ್ಲಿ ನಡೆದಿರುವ ಅಗ್ನಿ ದುರಂತ ಭಯಾನಕವಾಗಿದೆ. ಘಟನೆಯಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಘಟನಾ ಸ್ಥಳದಲ್ಲಿ ಅಧಿಕಾರಿಗಳು ಅಗತ್ಯವಿರುವ ಎಲ್ಲ ಸಹಾಯ ಮಾಡುತ್ತಿದ್ದಾರೆ’ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT