ಶ್ರೀನಗರ: ಜಮ್ಮು–ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಮೂರು ಉಗ್ರರು ಹತರಾಗಿದ್ದಾರೆ.
ನಿಖರ ಮಾಹಿತಿ ಮೇರೆಗೆ ಗುರುವಾರ ಚೆವಾ ಉಲರ್ ಪ್ರದೇಶದಲ್ಲಿ ಶೋಧ ಕಾರ್ಯಚರಣೆಯನ್ನು ಆರಂಭಿಸಿದಭದ್ರತಾ ಪಡೆಯು ಶುಕ್ರವಾರ ಮುಂಜಾನೆಯವರೆಗೂ ಉಗ್ರರಿಗಾಗಿ ಹುಡುಕಾಟ ನಡೆಸಿತು.
ಈ ವೇಳೆ ಉಗ್ರರು ಮತ್ತು ಭದ್ರತಾ ಪಡೆ ನಡುವಿನ ಗುಂಡಿನ ಚಕಮಕಿಯಲ್ಲಿ ಮೂರುಉಗ್ರರು ಮೃತಪಟ್ಟರು.ಈತ ಯಾವ ಸಂಘಟನೆಗೆ ಸೇರಿದವನು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಅಲ್ಲದೆ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.