ಯಡಿಯೂರಪ್ಪಗೆ ಅಧಿಕಾರ ದಾಹ: ಸಿದ್ದರಾಮಯ್ಯ

ಶುಕ್ರವಾರ, ಮೇ 24, 2019
30 °C

ಯಡಿಯೂರಪ್ಪಗೆ ಅಧಿಕಾರ ದಾಹ: ಸಿದ್ದರಾಮಯ್ಯ

Published:
Updated:

ಕಲಬುರ್ಗಿ: ಬಿ.ಎಸ್.ಯಡಿಯೂರಪ್ಪ ಅವರಿಗೆ ಅಧಿಕಾರದ ಲಾಲಸೆ, ದಾಹ ಹೆಚ್ಚಾಗಿದೆ. ಹೀಗಾಗಿ ಏನೇನೋ ಮಾತನಾಡುತ್ತಿದ್ದಾನೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ತಿಪ್ಪರಲಾಗ ಹಾಕಿದರೂ ಚಿಂಚೋಳಿ, ಕುಂದಗೋಳ ಉಪ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ ಎಂದರು.

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು ನಮ್ನ ಸಂಖ್ಯಾಬಲ 109 ಕ್ಕೆ ಏರಿಗೆಯಾಗಲಿದೆ ಎಂಬ ಯಡಿಯೂರಪ್ಪ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಯಡಿಯೂರಪ್ಪಗೆ ಅಧಿಕಾರ ದಾಹ. ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳೇ ಗೆಲುವು ಸಾಧಿಸುತ್ತಾರೆ. 113 ಸ್ಥಾನಗಳು ಬಂದರೆ ತಾನೆ ಯಡಿಯೂರಪ್ಪ ಮುಖ್ಯಮಂತ್ರಿ ಆಗುವುದು ಎಂದು ವ್ಯಂಗ್ಯವಾಡಿದರು.

20 ಅತೃಪ್ತ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂಬ ಯಡಿಯೂರಪ್ಪ ಹೇಳಿಕೆಗೆ, ನಮ್ಮಲ್ಲಿ ಅತೃಪ್ತರು ಇಲ್ಲ. ಇರುವ ಅತೃಪ್ತರೆಲ್ಲರೂ ಬಿಜೆಪಿಯಲ್ಲಿ ಇದ್ದಾರೆ. ದುಡ್ಡು ಕೊಟ್ಟು ಖರೀದಿ ಮಾಡೋಕೆ ಇವರಿಗೆ ದುಡ್ಡು ಎಲ್ಲಿಂದ ಬರುತ್ತದೆ. ಅಸಮಾಧಾನ ಎಲ್ಲ ಪಕ್ಷಗಳಲ್ಲೂ ಇರುತ್ತದೆ ಎಂದರು.

ಬರಹ ಇಷ್ಟವಾಯಿತೆ?

 • 9

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !