ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

13 ಸ್ಥಾನಗಳಲ್ಲಿ ಬಿಜೆಪಿ ಗೆಲುವು: ಯಡಿಯೂರಪ್ಪ ವಿಶ್ವಾಸ

Last Updated 8 ಡಿಸೆಂಬರ್ 2019, 10:01 IST
ಅಕ್ಷರ ಗಾತ್ರ

ಧರ್ಮಸ್ಥಳ:ನೇತ್ರಾವತಿ ನದಿಯ ಕಿಂಡಿ ಅಣೆಕಟ್ಟೆಗೆ ತಡೆಗೋಡೆ ಕಟ್ಟುವಂತೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮನವಿ ಮಾಡಿದ್ದರು. ಅದನ್ನು ಬಿಡುಗಡೆ ಮಾಡಿದ್ದೇನೆ. ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ಧರ್ಮಸ್ಥಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,ಉಪಚುನಾವಣೆಯಲ್ಲಿ ಬಿಜೆಪಿ‌ ಕನಿಷ್ಠ 13 ಸ್ಥಾನಗಳಲ್ಲಿ ಜಯಗಳಿಸಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಸ್ಥಾನದಲ್ಲಿ ಗೆಲ್ಲಬಹುದು. ಮುಂದಿನ ಮೂರೂವರೆ ವರ್ಷ ಬಿಜೆಪಿ ಸರ್ಕಾರ ರಾಜ್ಯದ ಸರ್ವಾಂಗೀಣ ಅಭಿವೃದ್ದಿಗಾಗಿ ಕೆಲಸ ಮಾಡಲಿದೆ ಎಂದರು.

ಉಪ ಮುಖ್ಯ ಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಇದ್ದರು. ಬಳಿಕ ಮುಖ್ಯಮಂತ್ರಿ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ದೇವರ ದರ್ಶನ ಪಡೆದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT