ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಯೋಗ: ಜೀವನದ ಅವಿಭಾಜ್ಯ ಅಂಗವಾಗಲಿ’

ರಾಂಚಿಯ ಪ್ರಭಾತ್‌ ತಾರಾ ಮೈದಾನದಲ್ಲಿ ಯೋಗ ದಿನಾಚರಣೆ l ಪ್ರಧಾನಿ ನರೇಂದ್ರ ಮೋದಿ ನೇತೃತ್ವ
Last Updated 22 ಜೂನ್ 2019, 12:57 IST
ಅಕ್ಷರ ಗಾತ್ರ

ನವದೆಹಲಿ/ರಾಂಚಿ: ‘ಯೋಗ ಎಂಬುದು ಧರ್ಮ, ಜಾತಿ, ವರ್ಣ, ಲಿಂಗಭೇದ ಹಾಗೂ ಪ್ರಾದೇಶಿಕತೆಯನ್ನು ಮೀರಿದ್ದಾಗಿದೆ. ಹೀಗಾಗಿ ಎಲ್ಲರೂ ಯೋಗಾಭ್ಯಾಸವನ್ನು ತಮ್ಮ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಳ್ಳಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯಲ್ಲಿ ಮನವಿ ಮಾಡಿದರು.

5ನೇ ವಿಶ್ವ ಯೋಗ ದಿನಾಚರಣೆ ಅಂಗವಾಗಿ ರಾಂಚಿಯ ಪ್ರಭಾತ್‌ ತಾರಾ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 40 ಸಾವಿರಕ್ಕೂ ಅಧಿಕ ಜನರೊಂದಿಗೆ ಮೋದಿ ಅವರೂ ಯೋಗಾಸನ ಮಾಡಿ ಗಮನ ಸೆಳೆದರು.

‘ಯೋಗ ನಿರಂತರವಾಗಿ ವಿಕಾಸ ಹೊಂದುತ್ತಲೇ ಇದೆ. ವ್ಯಕ್ತಿಯೊಬ್ಬ ಆರೋಗ್ಯಪೂರ್ಣ ಜೀವನ ನಡೆಸಲು ನೆರವಾಗುವ ಯೋಗವನ್ನು ನಗರಗಳಿಂದ ಗ್ರಾಮೀಣ ಭಾಗಕ್ಕೆ ಒಯ್ಯಬೇಕು, ಅಲ್ಲಿಂದ ಬುಡಕಟ್ಟು ಜನರಿಗೂ ತಲುಪುವಂತೆ ನೋಡಿಕೊಳ್ಳಬೇಕು’ ಎಂದು ಪ್ರತಿಪಾದಿಸಿದರು.

ವಿವಿಧೆಡೆ ಯೋಗ ದಿನಾಚರಣೆ: ರಾಷ್ಟ್ರದ ವಿವಿಧೆಡೆ ನಡೆದ ಕಾರ್ಯಕ್ರಮಗಳಲ್ಲಿ ಗಣ್ಯರು ಪಾಲ್ಗೊಂಡಿದ್ದರು. ನವದೆಹಲಿಯ ಚಾಣಕ್ಯಪುರಿಯಲ್ಲಿರುವ ಪ್ರವಾಸಿ ಭಾರತೀಯ ಕೇಂದ್ರದಲ್ಲಿ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ನೇತೃತ್ವದಲ್ಲಿ ಯೋಗಾಸನ ಪ್ರದರ್ಶಿಸಲಾಯಿತು. 60 ದೇಶಗಳ ರಾಯಭಾರಿಗಳು, ರಾಜತಾಂತ್ರಿಕ ಅಧಿಕಾರಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

‘ಮಕ್ಕಳಂತೆ ಆಡುವವರಿಗೆ ಯೋಗ ಸಹಕಾರಿ’
ತಿರುವನಂತಪುರ: ‘ಮಕ್ಕಳ ರೀತಿ ಹುಡುಗಾಟಿಕೆ ಮಾಡುವವರಿಗೆ ಯೋಗಾಭ್ಯಾಸ ಉಪಯುಕ್ತ’ ಎಂದು ಹೇಳುವ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್‌ಮಾಧವ್‌ ಹೇಳಿದರು.

ಯೋಗ ದಿನಾಚರಣೆಯಲ್ಲಿ ಮಾತನಾಡಿದ ಅವರು, ಸಂಸತ್‌ನ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ಅವರ ಭಾಷಣದ ಸಮಯದಲ್ಲಿ ಮೊಬೈಲ್‌ ನೋಡುತ್ತಿದ್ದ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರಿಗೆ ಪರೋಕ್ಷವಾಗಿ ಕುಟುಕಿದರು.

**

ದೈಹಿಕ ಮತ್ತು ಮಾನಸಿಕವಾಗಿ ಸಮತೋಲ ಕಾಯ್ದುಕೊಳ್ಳುವುದೇ ಯೋಗದ ತಿರುಳು. ಜೊತೆಗೆ ಮಾನವೀಯ ಮೌಲ್ಯಗಳೊಂದಿಗೂ ನಾವು ತಾದಾತ್ಯ ಹೊಂದಲು ಯೋಗ ಸಹಕಾರಿ
-ಅಮೀನಾ ಮೊಹಮ್ಮದ್‌,ಉಪಮಹಾ ಕಾರ್ಯದರ್ಶಿ, ವಿಶ್ವಸಂಸ್ಥೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT