ನವದೆಹಲಿ: ಕೋವಿಡ್–19 ಪಿಡುಗಿನ ಕರಿನೆರಳಿನ ನಡುವೆ ಭಾನುವಾರ ಅಂತರರಾಷ್ಟ್ರೀಯ ಯೋಗ ದಿನಾಚರಣೆಯು ಯಾವುದೇ ಸಾಮೂಹಿಕ ಕಾರ್ಯಕ್ರಮಗಳಿಲ್ಲದೆ ಕೇವಲಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ವಿಶ್ವದೆಲ್ಲೆಡೆ ನಡೆಯಲಿದೆ.

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆರಂಭವಾದ ಬಳಿಕ ಇದೇ ಮೊದಲ ಬಾರಿಗೆ ಡಿಜಿಟಲ್ ವೇದಿಕೆಯಲ್ಲಿ ಯೋಗ ದಿನ ನಡೆಯುತ್ತಿದೆ. ಈ ವರ್ಷ ಕೋವಿಡ್–19 ಕಾರಣದಿಂದಾಗಿ ‘ಮನೆಯಲ್ಲಿ ಯೋಗ, ಕುಟುಂಬದೊಡನೆ ಯೋಗ’ ಎಂಬ ಘೋಷಣೆಯೊಂದಿಗೆ ಈ ವರ್ಷದ ಯೋಗ ದಿನಾಚರಣೆ ನಡೆಯಲಿದ್ದು, ಬೆಳಗ್ಗೆ 7 ಗಂಟೆಗೆ ಜನರು ಆನ್‌ಲೈನ್ ಮೂಲಕ ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು.

ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಈ ಕಾರ್ಯಕ್ರಮದ ಪ್ರಮುಖ ಭಾಗವಾಗಿರಲಿದ್ದು, ಬೆಳಗ್ಗೆ 6.30ಕ್ಕೆ ಅವರು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರದಲ್ಲಿ ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆಯ ತಂಡವು 45 ನಿಮಿಷ ಯೋಗಾಭ್ಯಾಸದ ಪ್ರದರ್ಶನ ನೀಡಲಿದೆ.

ಈ ವರ್ಷದ ಯೋಗ ದಿನಾಚರಣೆಯನ್ನು ಲೇಹ್‌ನಲ್ಲಿ ಅದ್ಧೂರಿಯಾಗಿ ಆಚರಿಸಲು ಆಯುಷ್ ಸಚಿವಾಲಯ ಉದ್ದೇಶಿಸಿತ್ತು. ಆದರೆ ಕೋವಿಡ್–19 ಪಿಡುಗಿನ ಕಾರಣದಿಂದಾಗಿ ಇದನ್ನು ರದ್ದುಗೊಳಿಸಲಾಗಿತ್ತು. ‘ಕೋವಿಡ್–19ನಿಂದಾಗಿ ವಿಶ್ವದೆಲ್ಲೆಡೆ ಆರೋಗ್ಯ ತುರ್ತುಪರಿಸ್ಥಿತಿ ಘೋಷಿಸಲಾಗಿದೆ. ಹೀಗಾಗಿ ಈ ವರ್ಷ ಆಚರಣೆಗಿಂತ ಹೆಚ್ಚಿನ ಆದ್ಯತೆಯನ್ನು ಮನೆಯಲ್ಲೇ ಯೋಗ ಮಾಡಿ, ಕುಟುಂಬದೊಡನೆ ಯೋಗ ಮಾಡಿ ಎನ್ನುವ ವಿಷಯಕ್ಕೆ ನೀಡಲಾಗಿದೆ’ ಎಂದು ಸಚಿವಾಲಯ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.