ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಗಿ ಸಂಪುಟ ವಿಸ್ತರಣೆ ಸಾಧ್ಯತೆ

Last Updated 27 ಮೇ 2019, 19:46 IST
ಅಕ್ಷರ ಗಾತ್ರ

ಲಖನೌ: ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ ಸಂಪುಟದಲ್ಲಿ ಸಚಿವರಾಗಿರುವ ಮೂವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಗೆದ್ದಿದ್ದಾರೆ. ಹಾಗಾಗಿ, ಸಂಪುಟದಲ್ಲಿ ಮೂರು ಸ್ಥಾನಗಳು ಖಾಲಿಯಾಗಲಿವೆ. ಬಿಜೆಪಿಯ ಮೇಲೆ ಅತೃಪ್ತಿಗೊಂಡು ಎನ್‌ಡಿಎ ಮೈತ್ರಿ ಕಡಿದುಕೊಂಡಿದ್ದ ಎಸ್‌ಬಿಎಸ್‌ಪಿ ನಾಯಕ ಒ.ಪಿ. ರಾಜ್‌ಭರ್‌ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಲಾಗಿದೆ. ಹೀಗಾಗಿ ಮತ್ತೊಂದು ಸ್ಥಾನವೂ ಖಾಲಿಯಾಗಿದೆ.

ಲೋಕಸಭಾ ಚುನಾವಣೆಯಲ್ಲಿ ದಣಿವಿಲ್ಲದೆ ಕೆಲಸ ಮಾಡಿದವರಿಗೆ ‘ಪ್ರತಿಫಲ’ ನೀಡುವ ಉದ್ದೇಶವನ್ನು ಬಿಜೆಪಿ ಹೊಂದಿದೆ. ಹಾಗಾಗಿ, ಕೆಲವರು ಸಂಪುಟಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ.

2017ರ ಮಾರ್ಚ್‌ನಲ್ಲಿ ಯೋಗಿ ಅವರ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಅದಾದ ಬಳಿಕ, ಇದೇ ಮೊದಲಿಗೆ ಸಂಪುಟದ ವಿಸ್ತರಣೆ ಆಗುವ ಸಾಧ್ಯತೆ ಇದೆ.

ನಾಲ್ವರು ಸಚಿವರು ಲೋಸಕಭೆಗೆ ಸ್ಪರ್ಧಿಸಿದ್ದರು. ಅವರಲ್ಲಿ ಒಬ್ಬರು ಸೋತಿದ್ದಾರೆ. ಉತ್ತರ ಪ್ರದೇಶದ 80 ಲೋಕಸಭಾ ಕ್ಷೇತ್ರಗಳ ಪೈಕಿ 62ರಲ್ಲಿ ಬಿಜೆಪಿ ಗೆದ್ದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT