ಬುಧವಾರ, ಏಪ್ರಿಲ್ 1, 2020
19 °C

ಸಿಎಎ: ಸಾಯಲೆಂದೇ ಪ್ರತಿಭಟನಕಾರರು ರಸ್ತೆಗೆ ಬಂದಿದ್ದರು –ಯೋಗಿ ಹೇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ: ‘ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆ ಸಂದರ್ಭದಲ್ಲಿ ಮೃತಪಟ್ಟವರು ವಾಸ್ತವವಾಗಿ ಸಾಯಲು ಬಯಸಿದ್ದವರು’  ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿರುವುದು ಇದು ಈಗ ವಿವಾದದ ಸ್ವರೂಪ ಪಡೆದುಕೊಂಡಿದೆ.

ರಾಜ್ಯಪಾಲರ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದ ಮೇಲೆ ವಿಧಾನ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ‘ರಾಜ್ಯದಲ್ಲಿ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರ ಗೋಲಿಬಾರ್‌ನಲ್ಲಿ ಯಾರೊಬ್ಬರೂ ಮೃತಪಟ್ಟಿಲ್ಲ’ ಎಂದು ಪ್ರತಿಪಾದಿಸಿದರು.

‘ಸಾಯಲೇಬೇಕು ಎಂದು ಯಾರಾದರೂ ರಸ್ತೆಗೆ ಬಂದರೆ ಅದನ್ನು ಯಾರಿಂದಲೂ ತಪ್ಪಿಸಲಾಗದು’ ಎಂದು ಹೇಳಿದ ಅವರು, ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ರಾಜ್ಯ ಪೊಲೀಸರು ಉತ್ತಮ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದರು.

‘ಪೊಲೀಸರಿಂದ ಯಾರೊಬ್ಬರು ಸತ್ತಿಲ್ಲ. ಗಲಭೆಕೋರರು ಹಾರಿಸಿದ ಗುಂಡಿನಿಂದ ಪ್ರತಿಭಟನಕಾರರು ಸತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಹೇಳಿದರು. ಆದರೆ, ಇನ್ನೊಂದೆಡೆ ಪೊಲೀಸರೇ ಈ ಹಿಂದೆ, ‘ಪೊಲೀಸರ ಗುಂಡಿನಿಂದಲೂ ಕೆಲ ಪ್ರತಿಭಟನಕಾರರು ಸತ್ತಿದ್ದಾರೆ’ ಎಂದು ಹೇಳಿಕೆ ನೀಡಿದ್ದರು.

ಸಿಎಎ ವಿರುದ್ಧದ ಪ್ರತಿಭಟನೆ ಬೆಂಬಲಿಸಿದ್ದಕ್ಕಾಗಿ ವಿರೋಧಪಕ್ಷಗಳ ಮುಖಂಡರು ಮಹಮ್ಮದ್‌ ಆಲಿ ಜಿನ್ನಾ ಬೆಂಬಲಿಗರು ಎಂದು ದೂಷಿಸಿದರು. ನಾವು ಶಾಂತಿಯುತ ಪ್ರತಿಭಟನೆಯ ವಿರುದ್ಧವಾಗಿಲ್ಲ. ಆದರೆ, ಕಾನೂನು ಕೈಗೆ ತೆಗೆದುಕೊಳ್ಳುವುದನ್ನು ನಾವು ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು