ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಯುವ’ ನಾಯಕ ಕಾಂಗ್ರೆಸ್‌ ಅಧ್ಯಕ್ಷನಾಗಲಿ: ಅಮರಿಂದರ್‌ ಸಿಂಗ್

Last Updated 6 ಜುಲೈ 2019, 20:00 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ರಾಹುಲ್‌ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗುವ, ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ‘ಯುವ ನಾಯಕ’ನನ್ನು ಆಯ್ಕೆ ಮಾಡಬೇಕು ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌ ಪ್ರತಿಪಾದಿಸಿದ್ದಾರೆ.

ಕಾಂಗ್ರೆಸ್‌ಗೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ಪಕ್ಷದ ಕೇಂದ್ರೀಯ ಕಾರ್ಯಕಾರಿ ಸಮಿತಿಯು ಜುಲೈ 10 ಅಥವಾ 11ರಂದು ಸಭೆ ಸೇರುವ ನಿರೀಕ್ಷೆ ಇದೆ. ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಸುಶೀಲ್‌ ಕುಮಾರ್‌ ಶಿಂಧೆ ಅವರ ಹೆಸರು ಕೇಳಿಬರುತ್ತಿರುವ ಹೊತ್ತಿನಲ್ಲಿಯೇ ಅಮರಿಂದರ್‌ ಅವರು ಟ್ವೀಟ್‌ ಮೂಲಕ ನೀಡಿರುವ ಈ ಹೇಳಿಕೆ ಮಹತ್ವಪಡೆದಿದೆ.

‘ಅಧ್ಯಕ್ಷರ ರಾಜೀನಾಮೆ ನಿರ್ಧಾರ ದುರದೃಷ್ಟಕರ. ಪಕ್ಷಕ್ಕೆ ಶಕ್ತಿ ತುಂಬಬಲ್ಲಂಥ ಇನ್ನೊಬ್ಬ ಯುವ ನಾಯಕ ಆ ಹುದ್ದೆಗೆ ಏರುವುದನ್ನು ನೋಡಲು ಇಚ್ಛಿಸುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ಪೂರ್ಣ ಜವಾಬ್ದಾರಿಯನ್ನು ಹೊತ್ತುಕೊಂಡು ರಾಹುಲ್‌ ಗಾಂಧಿ ಅವರು ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT