ಶುಕ್ರವಾರ, ಏಪ್ರಿಲ್ 23, 2021
22 °C
ದೇಶದ ಎರಡನೇ ಅತ್ಯುನ್ನತ ನಾಗರಿಕ ಗೌರವ

‘ಪದ್ಮ ವಿಭೂಷಣ’ ಪುರಸ್ಕಾರಕ್ಕೆ ಮೇರಿ ಕೋಮ್‌ ಹೆಸರು ಶಿಫಾರಸು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಪಿಷ್‌ನಲ್ಲಿ ಆರು ಬಾರಿ ಚಾಂಪಿಯನ್‌ ಆಗಿರುವ ಮೇರಿ ಕೋಮ್‌ ಅವರ ಹೆಸರನ್ನು ದೇಶದ ಎರಡನೇ ಅತ್ಯುನ್ನತ ನಾಗರಿಕ ಗೌರವ ‘ಪದ್ಮ ವಿಭೂಷಣ’ ಪುರಸ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಜೊತೆಗೆ ಬ್ಯಾಡ್ಮಿಂಟನ್‌ ಆಟಗಾರ್ತಿ ಪಿ.ವಿ. ಸಿಂಧು ಸೇರಿ ಒಟ್ಟು ಎಂಟು ಮಹಿಳಾ ಕ್ರೀಡಾಪಟುಗಳನ್ನು ಪದ್ಮ ಭೂಷಣ, ಪದ್ಮಶ್ರೀ ಗೌರವಗಳಿಗೆ ನಾಮನಿರ್ದೇಶನ ಮಾಡಲಾಗಿದೆ.

ಬ್ಯಾಡ್ಮಿಂಟನ್‌ ಪಟು ಸಿಂಧು ಅವರು ಸ್ವಿಟ್ಜರ್‌ಲೆಂಡ್‌ನಲ್ಲಿ ಇತ್ತೀಚೆಗೆ ಮುಕ್ತಾಯವಾದ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಪ್ರಶಸ್ತಿ ಗೆಲ್ಲುವ ಮೂಲಕ ಈ ಸಾಧನೆ ಮಾಡಿದ ಮೊದಲ ಕ್ರೀಡಾಪಟು ಎನಿಸಿದ್ದಾರೆ. ಹೀಗಾಗಿ ಅವರ ಹೆಸರನ್ನು ‘ಪದ್ಮ ಭೂಷಣ’ ಗೌರವಕ್ಕೆ ಶಿಫಾರಸು ಮಾಡಲಾಗಿದೆ ಎಂದು ಯುವಜನ ಮತ್ತು ಕ್ರೀಡಾ ಇಲಾಖೆ ತಿಳಿಸಿದೆ.

ಕುಸ್ತಿ ಪಟು ವಿನೇಶ್‌ ಪೊಗಟ್‌, ಟೇಬಲ್‌ ಟೆನಿಸ್‌ ಆಟಗಾರ್ತಿ ಮಾಣಿಕ್‌ ಬಾತ್ರಾ, ಮಹಿಳಾ ಕ್ರಿಕೆಟ್‌ ತಂಡದ ಹರ್ಮನ್‌ಪ್ರೀತ್‌ ಕೌರ್‌, ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್‌, ಮಾಜಿ ಶೂಟರ್‌ ಸುಮಾ ಶಿರೂರ್‌ ಹಾಗೂ ಪರ್ವತಾರೋಹಿ ಅವಳಿ ಸಹೋದರಿಯರಾದ ತಾಶಿ ಮಲಿಕ್‌ ಮತ್ತು ನುಂಗ್ಶಿ ಮಲಿಕ್‌ ಅವರ ಹೆಸರುಗಳನ್ನು ಕಳುಹಿಸಿಕೊಡಲಾಗಿದೆ.

‘ಮಾಜಿ ಹಾಕಿ ಆಟಗಾರ ಎಂ.ಪಿ. ಗಣೇಶ್‌, ಅರ್ಚರಿ ಪಟು ತರುಣ್‌ದೀಪ್‌ ರಾಯ್‌ ಅವರ ಹೆಸರುಗಳನ್ನು ಪದ್ಮಶ್ರೀ ಪುರಸ್ಕಾರಕ್ಕೆ ನಾಮ ನಿರ್ದೇಶನ ಮಾಡಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು