ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುರುಗ್ರಾಮ: ಬಿಜೆಪಿ ವಿರುದ್ಧ ಯುವ ಕಾಂಗ್ರೆಸ್‌ ಪ್ರತಿಭಟನೆ

Last Updated 16 ಜನವರಿ 2019, 17:48 IST
ಅಕ್ಷರ ಗಾತ್ರ

ನವದೆಹಲಿ/ಗುರುಗ್ರಾಮ: ಕರ್ನಾಟಕದ ಜೆಡಿಎಸ್‌–ಕಾಂಗ್ರೆಸ್‌ ಮೈತ್ರಿ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪಿಸಿ ಹರಿಯಾಣದ ಗುರುಗ್ರಾಮದಲ್ಲಿ ಕಾಂಗ್ರೆಸ್‌ ಯುವ ಘಟಕದ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.

ಕರ್ನಾಟಕದ ಬಿಜೆಪಿ ಶಾಸಕರು ವಾಸ್ತವ್ಯ ಹೂಡಿರುವ ಇಲ್ಲಿನ ಪಂಚತಾರಾ ಹೋಟೆಲ್‌ ಐಟಿಸಿ ಗ್ರ್ಯಾಂಡ್‌ ಭಾರತ್‌ ಮುಂದೆ, ಹರಿಯಾಣದ ಯುವ ಕಾಂಗ್ರೆಸ್‌ ಘಟಕದ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ ಸಿಂಗ್‌ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಕಾರ್ಯಕರ್ತರು ಧರಣಿ ನಡೆಸಿದರು.

ಬಿಜೆಪಿ ಸಂವಿಧಾನಕ್ಕೆ ಅಗೌರವ ತೋರುತ್ತಿದ್ದು, ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT