ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಣಿಕೆ ಕೇಂದ್ರದ ಭದ್ರತೆಗೆ ಒತ್ತಾಯ

Last Updated 30 ಏಪ್ರಿಲ್ 2019, 19:41 IST
ಅಕ್ಷರ ಗಾತ್ರ

ಅಮರಾವತಿ: ಲೋಕಸಭಾ ಚುನಾವಣೆಯ ಮತ ಎಣಿಕೆಯ ದಿನ ತೆಲುಗು ದೇಶಂ ಪಕ್ಷದವರು (ಟಿಡಿಪಿ) ಗಲಭೆ ಸೃಷ್ಟಿಸುವ ಸಾಧ್ಯತೆ ಇರುವುದರಿಂದ ಮತ ಎಣಿಕೆ ಕೇಂದ್ರಗಳಿಗೆ ಕೇಂದ್ರ ಮೀಸಲುಪಡೆಯ ರಕ್ಷಣೆ ಒದಗಿಸಬೇಕು ಎಂದು ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷವು ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.

ಈ ಬಗ್ಗೆ ಆಯೋಗಕ್ಕೆ ಪತ್ರ ಬರೆದಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ ವಿ. ವಿಜಯಸಾಯಿ ರೆಡ್ಡಿ ಅವರು, ‘ಆಂಧ್ರದಲ್ಲಿ ಆಡಳಿತ ನಡೆಸುತ್ತಿರುವ ಟಿಡಿಪಿ, ಮತ ಎಣಿಕೆಯ ಸಂದರ್ಭದಲ್ಲಿ ಗಲಭೆ ಸೃಷ್ಟಿಸಲು ಯೋಜನೆ ರೂಪಿಸುತ್ತಿದೆ ಎಂಬ ಮಾಹಿತಿ ಲಭಿಸಿದೆ ಎಂದಿದ್ದಾರೆ.

ಮತ ಎಣಿಕೆಯ ಸಂದರ್ಭದಲ್ಲಿಅಧಿಕಾರಿಗಳ ಮೇಲೆ ಆ ಪಕ್ಷದ ನಾಯಕರು ಒತ್ತಡ ಹೇರುವ ಸಾಧ್ಯತೆ ಇರುವುದರಿಂದ ಚುನಾವಣಾ ಆಯೋಗ ಎಣಿಕಾ ಕಾರ್ಯದ ಮೇಲೆ ಸತತವಾಗಿ ನಿಗಾ ಇಡಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT