ಗುರುವಾರ , ಫೆಬ್ರವರಿ 27, 2020
19 °C

ದೆಹಲಿಯಲ್ಲಿ ಒಎಸ್‌ಡಿ ಬಂಧನ: ಭ್ರಷ್ಟಾಚಾರ ಸಹಿಸುವುದಿಲ್ಲ– ಮನೀಶ್ ಸಿಸೋಡಿಯಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವ ದೆಹಲಿ: ಭ್ರಷ್ಟಾಚಾರದ ಆರೋಪದಲ್ಲಿ ಬಂಧಿಸಲ್ಪಟ್ಟ ದೆಹಲಿ ಸರ್ಕಾರದ ವಿಶೇಷ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆಗ್ರಹಿಸಿದ್ದಾರೆ. 

ದೆಹಲಿ, ಅಂಡಮಾನ್ ಮತ್ತು ನಿಕೋಬಾರ್ ನಾಗರಿಕ ಸೇವೆ (DANIS) ಹಿರಿಯ ಅಧಿಕಾರಿಯಾದ ಗೋಪಾಲ್  ಕೃಷ್ಣ ಮಾಧವ್  ಅವರನ್ನು ದೆಹಲಿ ವಿಧಾನಸಭಾ ಚುನಾವಣೆಗಿಂತ ಎರಡು ದಿನ ಮುಂಚಿತವಾಗಿ ಬಂಧಿಸಲಾಗಿತ್ತು.

ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐನ ಅಧಿಕಾರಿಗಳು ಹೆಣೆದ ಬಲೆಗೆ ಮಾಧವ್ ಸಿಕ್ಕಿ ಬಿದ್ದಿದ್ದು ಜಿಎಸ್‌ಟಿಗೆ ಸಂಬಂಧಿಸಿದಂತೆ ₹2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ತಿಳಿದು ಬಂದಿದೆ.

ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧಿಸಲಾದ ಅಧಿಕಾರಿ ಮಾಧವ್ ನನ್ನ(ಉಪಮುಖ್ಯಮಂತ್ರಿ) ಕಚೇರಿಯಲ್ಲಿ ಒಎಸ್‌ಡಿಯಾಗಿ ಕಾರ್ಯನಿರ್ವಹಿಸುತ್ತಿದ್ದರು, ಭ್ರಷ್ಟ ಅಧಿಕಾರಿಯನ್ನು ತಕ್ಷಣ ಶಿಕ್ಷಿಸಬೇಕು, ನನ್ನ ಅಧಿಕಾರಾವಧಿಯಲ್ಲಿ ಇಂತಹ ಭ್ರಷ್ಟ ಅಧಿಕಾರಿಗಳನ್ನು ಹಿಡಿಯುವಲ್ಲಿ ನೆರವಾಗಿದ್ದೇನೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಬಂಧಿತ ಅಧಿಕಾರಿಯು ಕಳೆದ ಐದು ವರ್ಷಗಳಿಂದ ಉಪಮುಖ್ಯಮಂತ್ರಿಗಳ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. 

ನನಗೆ ಚುನಾವಣೆ ಸಂದರ್ಭದಲ್ಲಿ ಬಂಧಿಸಿರುವುದರ ಬಗ್ಗೆ ಯಾವುದೇ ತಕರಾರು ಇಲ್ಲ, ಭ್ರಷ್ಟ ಅಧಿಕಾರಿಗಳನ್ನು ತಕ್ಷಣ ಬಂಧಿಸಬೇಕು, ಭ್ರಷ್ಟಾಚಾರವನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದ್ದಾರೆ. 

ಮಾಧವ್ ಅವರನ್ನು ವಿಚಾರಣೆಗಾಗಿ ಸಿಬಿಐನ ಮುಖ್ಯ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಆಮ್ಆದ್ಮಿ ಪಕ್ಷ (ಎಎಪಿ) 2015 ರಲ್ಲಿ  ಅಧಿಕಾರಕ್ಕೆ ಬಂದಾಗ ಮಾಧವ್ ಅವರನ್ನು ಅಧಿಕಾರಿಯಾಗಿ ನೇಮಿಸಲಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು