ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಮ್ಮ ಧೈರ್ಯ ಕೆಲವರಿಗಷ್ಟೆ ಇರಲು ಸಾಧ್ಯ: ಪ್ರಿಯಾಂಕ ಟ್ವೀಟ್‌

Last Updated 4 ಜುಲೈ 2019, 5:28 IST
ಅಕ್ಷರ ಗಾತ್ರ

ನವದೆಹಲಿ:ನಿಮ್ಮ ಧೈರ್ಯ ಕೆಲವರಿಗಷ್ಟೆ ಇರಲು ಸಾಧ್ಯ, ನಿಮ್ಮ ನಿರ್ಧಾರವನ್ನು ಗೌರವಿಸುತ್ತೇವೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಗುರುವಾರ ಟ್ವೀಟ್‌ ಮಾಡಿದ್ದಾರೆ.

ಬುಧವಾರ ರಾಹುಲ್‌ ಗಾಂಧಿ,ನಾನು ಕಾಂಗ್ರೆಸ್‌ನ ಅಧ್ಯಕ್ಷ ಹುದ್ದೆ ತೊರೆದಿದ್ದೇನೆ. ಹೊಸ ನಾಯಕನನ್ನು ತಡಮಾಡದೇ ಕೂಡಲೇ ಪಕ್ಷ ಆಯ್ಕೆ ಮಾಡಬೇಕು. ಆಯ್ಕೆ ಪ್ರಕ್ರಿಯೆಯಲ್ಲಿ ನಾನು ತಲೆ ಹಾಕುವುದಿಲ್ಲ ಎಂದು ರಾಹುಲ್‌ ಗಾಂಧಿ ಟ್ವೀಟ್‌ ಮಾಡಿದ್ದರು.

ಇದಕ್ಕೆ ರೀ ಟ್ವೀಟ್ ಮಾಡಿರುವ ಪ್ರಿಯಾಂಕ ಗಾಂಧಿ ’ನಿಮ್ಮ ಧೈರ್ಯ ಕೆಲವರಿಗಷ್ಟೆ ಇರಲು ಸಾಧ್ಯ, ನಿಮ್ಮ ನಿರ್ಧಾರವನ್ನು ಗೌರವಿಸುತ್ತೇವೆ‘ ಎಂದು ಟ್ವೀಟ್‌ ಮಾಡುವ ಮೂಲಕ ರಾಹುಲ್‌ ಗಾಂಧಿ ಅವರ ಧೈರ್ಯವನ್ನು ಮೆಚ್ಚಿದ್ದಾರೆ.

ಲೋಕಸಭೆ ಚುನಾವಣೆಯ ಸೋಲಿನ ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿ ಅವರು ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ, ಅದನ್ನು ಪಕ್ಷದ ಕಾರ್ಯಕಾರಿ ಸಮಿತಿ ಇನ್ನೂ ಅಂಗೀಕರಿಸಿಲ್ಲ. ಈ ನಡುವೆ ಕಾಂಗ್ರೆಸ್‌ ಮುಖ್ಯಮಂತ್ರಿಗಳೆಲ್ಲರೂ ರಾಹುಲ್‌ ಗಾಂಧಿ ಮೇಲೆ ಒತ್ತಡ ಹೇರುತ್ತಿದ್ದು, ಪಕ್ಷದ ಅಧ್ಯಕ್ಷ ಸ್ಥಾನವನ್ನು ತೊರೆಯದಂತೆ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT