ಶನಿವಾರ, ಆಗಸ್ಟ್ 15, 2020
26 °C

ನೇಪಾಳದಲ್ಲಿ ಸಿಕ್ಕಿಬಿದ್ದ ಕಳ್ಳರು- ಭಾರಿ ಪ್ರಮಾಣದ ಖೋಟಾ ನೋಟು ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನೇಪಾಳ: ಆರು ಮಂದಿ ಅಂತಾರಾಷ್ಟ್ರೀಯ ಕಳ್ಳರನ್ನು ಬಂಧಿಸಿರುವ ನೇಪಾಳ ಪೊಲೀಸರು ಭಾರತದಲ್ಲಿ ಚಲಾವಣೆಗೆ ತರಲು ಉದ್ದೇಶಿಸಿದ್ದ ಭಾರಿ ಪ್ರಮಾಣದ ಖೋಟಾ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.

ಭಾರತದಲ್ಲಿ ಚಲಾವಣೆಯಲ್ಲಿರುವ ₹2 ಸಾವಿರ, ₹ 500 ರ ನೋಟುಗಳನ್ನು ಬ್ಯಾಗುಗಳಲ್ಲಿ ತುಂಬಿಕೊಂಡು ಭಾರತಕ್ಕೆ ನುಸುಳಲು ಯತ್ನಿಸಿದ್ದರು ಎನ್ನಲಾಗಿದೆ. ಇವರಲ್ಲಿ ನಾಲ್ಕು ಮಂದಿ ಪಾಕಿಸ್ತಾನದವರು, ಇಬ್ಬರು ನೇಪಾಳಿಗಳು ಎಂದು ಗುರುತಿಸಲಾಗಿದೆ.

ಶುಕ್ರವಾರ ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನಕ್ಕೆ ಬರುತ್ತಿದ್ದಂತೆ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಆರೋಪಿಗಳು ಹೊಂದಿದ್ದ ಬ್ಯಾಗುಗಳನ್ನು ತಪಾಸಣೆಗೆ ಒಳಪಡಿಸಿದರು. ಈ ಸಮಯದಲ್ಲಿ ಭಾರಿ ಪ್ರಮಾಣದಲ್ಲಿ ನೋಟುಗಳು ಇರುವುದು ಕಂಡು ಬಂದಿದೆ. ಕೂಡಲೆ ಎಲ್ಲರನ್ನೂ ವಶಕ್ಕೆ ಪಡೆದಾಗ ಇವುಗಳನ್ನು ಭಾರತಕ್ಕೆ ಕೊಂಡೊಯ್ಯಲು ವಿಮಾನ ನಿಲ್ದಾಣಕ್ಕೆ ಬಂದುದಾಗಿ ಆರೋಪಿಗಳು ಬಾಯಿಬಿಟ್ಟಿದ್ದಾರೆ. ಕಠ್ಮಂಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.