ಬುಧವಾರ, ಜೂನ್ 3, 2020
27 °C

ರಾಜ್ಯದ ಎಲ್ಲಾ ಕುಟುಂಬಗಳ ಸಾರ್ವತ್ರಿಕ ಆರೋಗ್ಯ ಸಮೀಕ್ಷೆಗೆ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ತೀವ್ರ ಉಸಿರಾಟದ ಸಮಸ್ಯೆ (ಎಸ್ ಎ ಆರ್ ಐ), ಐಎಲ್ಐ ಮೊದಲಾದ ಕಾಯಿಲೆಗಳ ಬಗ್ಗೆ ನಿಗಾ ವಹಿಸಿ ಮಾಹಿತಿ ಸಂಗ್ರಹಿಸುವುದಕ್ಕಾಗಿ ಸಾರ್ವತ್ರಿಕ ಆರೋಗ್ಯ ಸಮೀಕ್ಷೆಗೆ ಆದೇಶ ನೀಡಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಮಂಗಳವಾರ ಈ ಸಂಬಂಧ ಸುತ್ತೋಲೆ ಹೊರಡಿಸಿದ್ದು, ಇದಕ್ಕಾಗಿಯೇ ಅಭಿವೃದ್ಧಿ ಪಡಿಸಲಾದ "ಹೆಲ್ತ್ ವಾಚ್ ಮೊಬೈಲ್ ಆ್ಯಪ್" ನಲ್ಲಿ ಅಥವಾ ಶಿಕ್ಷಣಾಧಿಕಾರಿ ಕಚೇರಿಯಲ್ಲಿನ ಕಂಪ್ಯೂಟರ್ ಮೂಲಕ ಆನ್ ಲೈನ್ ನಲ್ಲಿ ಶೀಘ್ರ  ಮಾಹಿತಿ ಅಪ್ ಲೋಡ್ ಮಾಡಬೇಕು ಎಂದು ಸೂಚಿಸಿದ್ದಾರೆ.

ಒಂದೊಂದು ಮತಗಟ್ಟೆಯನ್ನು ಘಟಕವನ್ನಾಗಿ ಮಾಡಲಾಗಿದ್ದು, ಈ ಹಿಂದೆ ಮತಗಟ್ಟೆ ಅಧಿಕಾರಿಗಳಾಗಿದ್ದವರು ಇನ್ನೊಬ್ಬರು ಶಿಕ್ಷಕರ ನೆರವು ಪಡೆದು ಸಮೀಕ್ಷೆ ಪೂರ್ಣಗೊಳಿಸಬೇಕು ಎಂದು ತಿಳಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು