ಶನಿವಾರ, ಆಗಸ್ಟ್ 15, 2020
27 °C

ಮನೆಗೆಲಸದ ಕಾರ್ಮಿಕರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಮನೆಗೆಲಸದ ಮಹಿಳಾ ಕಾರ್ಮಿಕರು ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ನಗರದ ಕಾರ್ಮಿಕ ಇಲಾಖೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಗೃಹ ಕಾರ್ಮಿಕರ ಹಕ್ಕುಗಳ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ‘ಲಾಕ್‌ಡೌನ್‌ ಆದಾಗಿನಿಂದಲೂ ಕೆಲಸವಿಲ್ಲ. ಕುಟುಂಬ ನಿರ್ವಹಣೆ ಕಷ್ಟವಾಗಿದೆ. ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ’ ಎಂದು ಕಾರ್ಮಿಕರು ಅಳಲು ತೋಡಿಕೊಂಡರು.

‘ಮನೆಗೆಲಸದವರನ್ನು ಪುನಃ ಕೆಲಸಕ್ಕೆ ತೆಗೆದುಕೊಳ್ಳುವಂತೆ ಮನೆ ಮಾಲೀಕರಿಗೆ ಸೂಚಿಸಬೇಕು. ಮುಂದಿನ ಮೂರು ತಿಂಗಳವರೆಗೆ ಪ್ರತಿ ತಿಂಗಳು ₹10 ಸಾವಿರ ಪರಿಹಾರ ನೀಡಬೇಕು. ಸರ್ಕಾರ ನಮಗೂ ₹5 ಸಾವಿರ ಪರಿಹಾರ ಕೊಡಬೇಕು. ಮನೆಗೆಲಸ ಮಾಡುವ ಹಿರಿಯ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಕಲ್ಪಿಸಿ, ಪ್ರತಿ ತಿಂಗಳು 3 ಸಾವಿರ ನೀಡಬೇಕು’ ಎಂದೂ ಅವರು ಒತ್ತಾಯಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು