ನಾಲ್ವರು ರೈಲ್ವೆ ಪೊಲೀಸರ ವಿರುದ್ಧ ಮೊಕದ್ದಮೆ

ಬುಧವಾರ, ಜೂನ್ 19, 2019
22 °C
ಪತ್ರಕರ್ತನ ಮೇಲೆ ಹಲ್ಲೆ ಪ್ರಕರಣ

ನಾಲ್ವರು ರೈಲ್ವೆ ಪೊಲೀಸರ ವಿರುದ್ಧ ಮೊಕದ್ದಮೆ

Published:
Updated:

ಮುಜಫ್ಫರ್‌ನಗರ: ಪತ್ರಕರ್ತರೊಬ್ಬರನ್ನು ಥಳಿಸಿದ್ದ ಆರೋಪಕ್ಕಾಗಿ ಠಾಣಾಧಿಕಾರಿ ಸೇರಿದಂತೆ ನಾಲ್ವರು ರೈಲ್ವೆ ಪೊಲೀಸರ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ರೈಲ್ವೆ ಪೊಲೀಸರಿಂದ ಪತ್ರಕರ್ತನ ಮೇಲೆ ಮೂತ್ರ ವಿಸರ್ಜನೆ

ಉತ್ತರ ಪ್ರದೇಶದ ಶಾಮ್ಲಿಯಲ್ಲಿ ಸಂಭವಿಸಿದ ಹಳಿ ತಪ್ಪಿದ ಗೂಡ್ಸ್‌ ರೈಲಿನ ಘಟನೆ ಕುರಿತು ವರದಿ ಮಾಡಲು ತೆರಳಿದ್ದ ಪತ್ರಕರ್ತ ಅಮಿತ್‌ ಶರ್ಮಾ ಅವರನ್ನು ಈ ಪೊಲೀಸರು ಥಳಿಸಿ, ಬಂಧಿಸಿದ್ದರು.

 ಠಾಣಾಧಿಕಾರಿ ರಾಕೇಶ್‌ ಕುಮಾರ್‌ ಸೇರಿದಂತೆ ನಾಲ್ವರ ವಿರುದ್ಧ ಐಪಿಸಿ ಸೆಕ್ಷನ್‌ 323 (ನೋವುಂಟು ಮಾಡುವುದು), 504 (ಉದ್ದೇಶಪೂರ್ವಕ ಅವಮಾನ),  506 (ಕ್ರಿಮಿನಲ್‌ ಬೆದರಿಕೆ), 364 (ಅಪಹರಣ), 392 (ಕಳ್ಳತನಕ್ಕಾಗಿ ಶಿಕ್ಷೆ) ಮತ್ತು 342 (ತಪ್ಪಾಗಿ ಬಂಧಿಸಿಟ್ಟಿರುವುದು) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇವರಲ್ಲಿ ಕುಮಾರ್ ಮತ್ತು ಕಾನ್‌ಸ್ಟೆಬಲ್‌ ಸಂಜಯ್‌ ಪವಾರ್‌ ಅವರನ್ನು ಬುಧವಾರ ಅಮಾನತು ಮಾಡಲಾಗಿತ್ತು ಎಂದು ಪೊಲೀಸ್‌ ವರಿಷ್ಠಾಧಿಕಾರಿ ಸುಭಾಷ್‌ ಚಾಂದ್‌ ದುಬೆ ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !