ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರೇಗಾ ಯೋಜನೆ: ಕೆರೆ ಹೂಳೆತ್ತುವ ಕಾಮಗಾರಿ ಪರಿಶೀಲಿಸಿದ ಸಚಿವ ದೇಶಪಾಂಡೆ

Last Updated 18 ಮೇ 2019, 5:38 IST
ಅಕ್ಷರ ಗಾತ್ರ

ಬೆಳಗಾವಿ: ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕಂದಾಯ ಸಚಿವರಾದ ಆರ್.ವಿ.ದೇಶಪಾಂಡೆ ಅವರು ನರೇಗಾ ಯೋಜನೆಯಡಿ ಹೊನಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾಂಬಳ ಕೆರೆಯ ಹೂಳೆತ್ತುವ ಕಾಮಗಾರಿಯನ್ನು ಶನಿವಾರ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ನರೇಗಾ ಕಾರ್ಮಿಕರ ಜತೆ ಸಂವಾದ ನಡೆಸಿದ ಸಚಿವರು, ಬರ ಪರಿಸ್ಥಿತಿಯಲ್ಲಿ ಜನರು ಗುಳೇ ಹೋಗುವುದನ್ನು ತಪ್ಪಿಸಲು ಗ್ರಾಮೀಣ ಭಾಗದ ಎಲ್ಲ ಕುಟುಂಬಗಳಿಗೂ ವರ್ಷವಿಡೀ ಉದ್ಯೋಗ ಒದಗಿಸಲು ಸರ್ಕಾರ ಉದ್ದೇಶಿಸಿದೆ ಎಂದರು.

ಕೆಲಸವಿಲ್ಲದ ಕಾರಣಕ್ಕೆ ಯಾವುದೇ ಕುಟುಂಬ ಗುಳೆ ಹೋಗುವುದನ್ನು ತಡೆಯಲು ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕನಿಷ್ಠ ಒಂದು ಕಾಮಗಾರಿ ಕೈಗೆತ್ತಿಕೊಳ್ಳುವಂತೆ ತಿಳಿಸಲಾಗಿದೆ.

ಪ್ರತಿಯೊಬ್ಬ ವ್ಯಕ್ತಿಗೆ 40 ಲೀಟರ್ ಕುಡಿಯುವ ನೀರು ಪ್ರತಿದಿನ ಪೂರೈಕೆಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ, ಗೋಶಾಲೆ ಹಾಗೂ ಮೇವು ಬ್ಯಾಂಕ್ ಸ್ಥಾಪಿಸಲಾಗಿದೆ. ಬರ ನಿರ್ವಹಣೆಗೆ ಸರ್ಕಾರ ಯುದ್ದೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ.

ಬರ ನಿರ್ವಹಣೆಗೆ ಹಣದ ಕೊರತೆ ಇಲ್ಲ. ಅಗತ್ಯತೆ ಆಧರಿಸಿ ಹೆಚ್ಚುವರಿ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.

ಮೋಡಬಿತ್ತನೆ ನಿರ್ಣಯ ಮಾಡಲಾಗಿದ್ದು, ಇದಕ್ಕಾಗಿ ಟೆಂಡರ್ ಕರೆಯಲಾಗಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮೋಡ ಬಿತ್ತನೆ ಮಾಡಲಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮಹಾರಾಷ್ಟ್ರ ಸರ್ಕಾರ ನೀರು ಬಿಡುಗಡೆಗೆ ಒಡಂಬಡಿಕೆ ಪ್ರಸ್ತಾವನೆ ಸಲ್ಲಿಸಿದ್ದು, ಇದರಲ್ಲಿ ಕೆಲ ಪರಿಷ್ಕರಣೆ ಮಾಡಿ ಮರು ಸಲ್ಲಿಸಲಾಗಿದೆ. ಶೀಘ್ರದಲ್ಲೇ ಒಡಂಬಡಿಕೆಗೆ ಸರ್ಕಾರ ಸಹಿ ಹಾಕಲಿದೆ. ಒಡಂಬಡಿಕೆಗೆ ಕಾಯದೇ ಮಾನವೀಯತೆ ಆಧಾರದ ಮೇಲೆ ಮಹಾರಾಷ್ಟ್ರ ಸರ್ಕಾರ ನೀರು ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿಕೊಂಡರು.

ಜಿಲ್ಲಾಧಿಕಾರಿ ಡಾ.ವಿಶಾಲ್ ಆರ್., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ. ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT