ಪದವಿ ಪೂರ್ವ ಶಿಕ್ಷಣ ಇಲಾಖೆ: ಶಿಖಾಗೆ ಹೆಚ್ಚುವರಿ ಜಬಾಬ್ದಾರಿ

ಶುಕ್ರವಾರ, ಏಪ್ರಿಲ್ 19, 2019
22 °C

ಪದವಿ ಪೂರ್ವ ಶಿಕ್ಷಣ ಇಲಾಖೆ: ಶಿಖಾಗೆ ಹೆಚ್ಚುವರಿ ಜಬಾಬ್ದಾರಿ

Published:
Updated:

ಬೆಂಗಳೂರು: ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ ಅವರು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕ ಹುದ್ದೆಯನ್ನು ಹೆಚ್ಚುವರಿಯಾಗಿ ನಿರ್ವಹಿಸಲಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಬಹುತೇಕ ಮುಗಿದಿದ್ದು, ಫಲಿತಾಂಶ ಇದೇ ತಿಂಗಳ ಕೊನೆಯಲ್ಲಿ ಪ್ರಕಟವಾಗಬೇಕಾಗಿದೆ.

ಅಲ್ಲದೆ, ರಾಜ್ಯ ಸರ್ವ ಶಿಕ್ಷಣ ಅಭಿಯಾನ ಯೋಜನಾ ನಿರ್ದೇಶಕ ಡಾ.ಎಂ.ಟಿ.ರೇಜು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಹುದ್ದೆಯನ್ನು ಹೆಚ್ಚುವರಿಯಾಗಿ ನಿರ್ವಹಿಸಲಿದ್ದಾರೆ.

ಈ ಸಂಬಂಧ ಮಂಗಳವಾರ ರಾತ್ರಿ ಆದೇಶ ಹೊರಡಿಸಲಾಗಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !