ಜಾತಿ– ಧರ್ಮದ ಹೆಸರಿನಲ್ಲಿ ಮತ ಕೇಳುವುದು ಕ್ರಿಮಿನಲ್ ಅಪರಾಧ: ಈಶ್ವರಖಂಡ್ರೆ

ಗೋಕಾಕ: ‘ವೀರಶೈವ– ಲಿಂಗಾಯತರು ಯಾವುದೇ ಕಾರಣಕ್ಕೂ ಜಾತಿಯ ಹೆಸರಿನಲ್ಲಿ ಮತ ಹಾಕುವುದಿಲ್ಲ. ಜಾತಿ– ಧರ್ಮದ ಹೆಸರಿನಲ್ಲಿ ಮತ ಕೇಳುವುದು ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಅಲ್ಲದೇ, ಕ್ರಿಮಿನಲ್ ಅಪರಾಧ ಕೂಡ ಆಗಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೇಳಿಕೆಗೆ ತಿರುಗೇಟು ನೀಡಿದರು.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಾತಿ ಧರ್ಮದ ಹೆಸರಿನಲ್ಲಿ ಮತ ಕೇಳುವವರಿಗೆ ಮತದಾರರು ತಕ್ಕ ಪಾಠ ಕಲಿಸಬೇಕು. ಮಹಾರಾಷ್ಟ್ರದಲ್ಲಿ ಅಧಿಕಾರಕ್ಕಾಗಿ ಪಕ್ಷಾಂತರ ಮಾಡಿದ ಎಲ್ಲರೂ ಸೋತಿದ್ದಾರೆ. ಅದೇ ರೀತಿ ಇಲ್ಲಿನ ಉಪಚುನಾವಣೆಯಲ್ಲೂ ಆಗಲಿದೆ. ಮತದಾರರು ಸೂಕ್ತ ನಿರ್ಣಯ ಕೈಗೊಳ್ಳಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
‘ಅಧಿಕಾರದ ದಾಹಕ್ಕಾಗಿ ಪಕ್ಷಾಂತರ ಮಾಡಿದ ರಮೇಶ ಅವರು ನೆರೆ ಸಂತ್ರಸ್ತರಿಗೆ ಏನೂ ಸಹಾಯ ಮಾಡಿಲ್ಲ. ಆಗ ಅವರು ಮುಂಬೈನ ಸ್ಟಾರ್ ಹೋಟೆಲ್ನಲ್ಲಿದ್ದರು. ಇದನ್ನೆಲ್ಲ ಜನರು ಸೂಕ್ಷ್ಮವಾಗಿ ವೀಕ್ಷಿಸಿದ್ದಾರೆ. ತಕ್ಕ ಪಾಠ ಕಲಿಸಲಿದ್ದಾರೆ’ ಎಂದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.