ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ ಕೈಬಿಟ್ಟಿದ್ದೇವೆ: ಬಸವರಾಜ ಹೊರಟ್ಟಿ

ಮಂಗಳವಾರ, ಏಪ್ರಿಲ್ 23, 2019
31 °C
’ಧರ್ಮದ ಮಾನ್ಯತೆಗೆ ರಾಜ್ಯ ಕೇಂದ್ರಕ್ಕೆ ಶಿಪಾರಸ್ಸು ಮಾಡಿದೆ’

ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ ಕೈಬಿಟ್ಟಿದ್ದೇವೆ: ಬಸವರಾಜ ಹೊರಟ್ಟಿ

Published:
Updated:

ಹುಬ್ಬಳ್ಳಿ: ‘ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡಬೇಕು ಎಂದು ರಾಜ್ಯ ಸರ್ಕಾರ ಕೇಂದ್ರಕ್ಕೆ ಈಗಾಗಲೇ ಶಿಫಾರಸ್ಸು ಮಾಡಿದೆ.  ಆದ್ದರಿಂದ ಪ್ರತ್ಯೇಕ ಧರ್ಮದ ಹೋರಾಟವನ್ನು ಕೈಬಿಟ್ಟಿದ್ದೇವೆ. ಆ ಬಗ್ಗೆ ಮಠಾಧೀಶರೊಂದಿಗೆ ಸಹ ಮಾತನಾಡಿದ್ದೇನೆ’ ಎಂದು ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಲಿಂಗಾಯತ ಧರ್ಮದ ಹೋರಾಟ ಹಿಂದಿನ ಚುನಾವಣೆ ಫಲಿತಾಂಶದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ‘ಚುನಾವಣೆ ಸಂದರ್ಭದಲ್ಲಿ ಈ ವಿಷಯದ ಬಗ್ಗೆ ಮಾತನಾಡುವುದು ಸರಿಯಲ್ಲ. ಹೋರಾಟ ಮಾಡುವಾಗ ಹೆಚ್ಚುಕಡಿಮೆ ಆಗುವುದು ಸಹಜ’ ಎಂದರು.

‘ಲಿಂಗಾಯತ ಧರ್ಮದ ಹೋರಾಟದಲ್ಲಿ ಪಾಲ್ಗೊಂಡಿದ್ದು ಚುನಾವಣೆ ಫಲಿತಾಂಶದ ಮೇಲೆ ಸ್ವಲ್ಪ ಪರಿಣಾಮ ಬೀರಿರಬಹುದು. ಆದರೆ ಹೋರಾಟವನ್ನು ತಪ್ಪು ಎಂದು ನಾನು ಹೇಳುವುದಿಲ್ಲ. ಹೋರಾಟಗಾರನಿಗೆ ಲಾಭ ಮತ್ತು ನಷ್ಟ ಇದ್ದದ್ದೇ’ ಎಂದು ಮಾಜಿ ಸಚಿವ, ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ಹೇಳಿದರು.

 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !