₹18 ಸಾವಿರ ಕೋಟಿ ಮನ್ನಾ

ಬುಧವಾರ, ಜೂನ್ 26, 2019
23 °C
ವಾಣಿಜ್ಯ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಸಂಪೂರ್ಣ ಚುಕ್ತಾ

₹18 ಸಾವಿರ ಕೋಟಿ ಮನ್ನಾ

Published:
Updated:

ಬೆಂಗಳೂರು: ಕೃಷಿ ಸಾಲ ಮನ್ನಾದ ಒಟ್ಟು ಮೊತ್ತದ ಬಗ್ಗೆ ಇದ್ದ ಗೊಂದಲ ಪರಿಹಾರವಾಗಿದ್ದು, ಸಾಲ ಮನ್ನಾದ ಒಟ್ಟು ಮೊತ್ತ ಈ ಹಿಂದೆ ಹೇಳಿದಂತೆ ₹ 46 ಸಾವಿರ ಕೋಟಿ ಅಲ್ಲ, ₹18 ಸಾವಿರ ಕೋಟಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ವಾಣಿಜ್ಯ ಬ್ಯಾಂಕುಗಳು ರೈತರ ಬೆಳೆ ಸಾಲ ಅಲ್ಲದೆ, ರೈತರು ಮಾಡಿದ್ದ ಇತರ ಸಾಲಗಳ ಮೊತ್ತವನ್ನೂ ಸಾಲ ಮನ್ನಾ ಬಾಬ್ತಿಗೆ ಸೇರಿಸಿದ ಕಾರಣ ಸಾಲ ಮನ್ನಾ ಮೊತ್ತ ₹46 ಸಾವಿರ ಕೋಟಿ ಎಂದು ಬಿಂಬಿಸಲಾಯಿತು. ಎಲ್ಲ ಜಿಲ್ಲೆಗಳಲ್ಲಿ ಅಧಿಕಾರಿಗಳು ಫಲಾನುಭವಿಗಳ ಮತ್ತು ಅವರ ಬೆಳೆ ಸಾಲದ ಮೊತ್ತದ ಕುರಿತು ಮಾಹಿತಿ ಸಂಗ್ರಹಿಸಿದಾಗ, ರಾಷ್ಟ್ರೀಕೃತ ಬ್ಯಾಂಕ್‌ಗಳು ತಪ್ಪು ಮಾಹಿತಿ ನೀಡಿದ್ದು ಬೆಳಕಿಗೆ ಬಂದಿತು ಎಂದು ಮೂಲಗಳು ಹೇಳಿವೆ.

ಸರ್ಕಾರ ಬೆಳೆ ಸಾಲ ಮನ್ನಾ ಪ್ರತಿ ರೈತನಿಗೆ ಗರಿಷ್ಠ ಮೊತ್ತ ₹ 2 ಲಕ್ಷ ಎಂದು ನಿಗದಿ ಮಾಡಲಾಗಿತ್ತು. ಒಂದು ವೇಳೆ ರೈತ ₹5 ಲಕ್ಷ ಸಾಲ ಮನ್ನಾ ಮಾಡಿದ್ದರೂ, ಸಾಲ ಮನ್ನಾ ಯೋಜನೆಯಡಿ ಕೇವಲ ₹ 2 ಲಕ್ಷಕ್ಕೆ ಅರ್ಹನಾಗುತ್ತಾನೆ. ಒಂದು ವೇಳೆ ಸಾಲ ಮನ್ನಾ ಅಡಿ ಹೆಚ್ಚಿಗೆ ಪಾವತಿ ಆಗಿದ್ದರೆ, ಹೆಚ್ಚುವರಿ ಮೊತ್ತ ವಾಪಸ್‌ ಪಡೆಯಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.

ವಾಣಿಜ್ಯ ಬ್ಯಾಂಕ್‌ ಸಾಲ ಚುಕ್ತಾ: ಇದೀಗ ರಾಜ್ಯ ಸರ್ಕಾರ ವಾಣಿಜ್ಯ ಬ್ಯಾಂಕುಗಳಿಗೆ ಪಾವತಿಸಬೇಕಾಗಿದ್ದ ₹ 6,589 ಕೋಟಿಯನ್ನು ಒಂದೇ ಕಂತಿನಲ್ಲಿ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.

ವಾಣಿಜ್ಯ ಬ್ಯಾಂಕುಗಳಲ್ಲಿ ರೈತರು ಪಡೆದಿರುವ ಬೆಳೆ ಸಾಲ ಮನ್ನಾ ಯೋಜನೆಗೆ ಅರ್ಹತೆ ಹೊಂದಿರುವ ರಿಸ್ಟ್ರಕ್ಚರ್ಡ್‌ ಸಾಲದ ಮೊತ್ತ ₹2,812 ಕೋಟಿ, ಓವರ್‌ ಡ್ಯೂ ₹3057 ಕೋಟಿ ಮತ್ತು ಪ್ರೋತ್ಸಾಹ ಧನಕ್ಕೆ ಅರ್ಹತೆ ಪಡೆದಿರುವ ಸಾಲ ₹720 ಕೋಟಿಗಳ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಇದರಲ್ಲಿ ಈಗಾಗಲೇ ಬಿಡುಗಡೆಗೊಳಿಸಲಾಗಿರುವ ಮೊತ್ತವನ್ನು ಕಡಿತಗೊಳಿಸಿ, ಉಳಿದ ಮೊತ್ತವನ್ನು ಒಂದೇ ಕಂತಿನಲ್ಲಿ ರೈತರ ಸಾಲದ ಖಾತೆಗೆ ಪಾವತಿಸಲಾಗುವುದು ಅಧಿಕಾರಿಗಳು ತಿಳಿಸಿದ್ದಾರೆ.

ಎನ್‌ಪಿಎ ಸಾಲಗಳು: ಎನ್‌ಪಿಎ ಸಾಲಗಳು ಮತ್ತು 2018 ರ ಜನವರಿ 1 ರಿಂದ ಬಡ್ಡಿ ಮೊತ್ತ ಪಾವತಿಸುವ ಬಗ್ಗೆ ಪ್ರತ್ಯೇಕವಾಗಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಆದೇಶ ತಿಳಿಸಿದೆ.

ರೈತರ ಖಾತೆಗೆ ಸಾಲ ಮನ್ನಾ ಹಣ ಪಾವತಿ ಮಾಡಲು ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆ
ಗಳ ಇಲಾಖೆ ಖಾತೆಯಲ್ಲಿರುವ ಮೊತ್ತವನ್ನು ಬಳಸಲಾಗುವುದು. ಒಂದು ವೇಳೆ ಹಣದ ಕೊರತೆ ಉಂಟಾದರೆ ಆರ್ಥಿಕ ಇಲಾಖೆ ಭರಿಸಲಿದೆ.

ಸಹಕಾರಿ ಬ್ಯಾಂಕ್‌ಗಳ ಬೆಳೆ ಸಾಲ ಮನ್ನಾ ಸ್ವಲ್ಪ ಬಾಕಿ ಉಳಿದಿದ್ದು ಸಾಲ ಪಾವತಿ ನಿಗದಿತ ದಿನದಂದು ಒಂದೇ ಕಂತಿನಲ್ಲಿ ಪಾವತಿಸಲಾಗುವುದು. ಶುಕ್ರವಾರ ಬ್ಯಾಂಕರ್‌ಗಳ ಸಭೆಯನ್ನು ಕರೆದಿದ್ದು, ಸಣ್ಣ ಪುಟ್ಟ ಸಂದೇಹಗಳ ಮತ್ತು ಸಮಸ್ಯೆಗಳು ಇದ್ದರೆ ಬಗೆಹರಿಸಿಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 12

    Happy
  • 0

    Amused
  • 1

    Sad
  • 0

    Frustrated
  • 3

    Angry

Comments:

0 comments

Write the first review for this !