ರಾಜ್ಯ ಸರ್ಕಾರದಿಂದ ₹ 400 ಕೋಟಿ ಬಾಕಿ : ಶಿವರಾಮ ಹೆಬ್ಬಾರ್ ಆರೋಪ

ಮಂಗಳವಾರ, ಜೂನ್ 18, 2019
23 °C
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ

ರಾಜ್ಯ ಸರ್ಕಾರದಿಂದ ₹ 400 ಕೋಟಿ ಬಾಕಿ : ಶಿವರಾಮ ಹೆಬ್ಬಾರ್ ಆರೋಪ

Published:
Updated:

ಶಿರಸಿ: ವಿದ್ಯಾರ್ಥಿಗಳಿಗೆ ನೀಡುವ ರಿಯಾಯಿತಿ ದರದ ಬಸ್ ಪಾಸ್‌ಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕಳೆದೈದು ವರ್ಷಗಳಿಂದ ₹400 ಕೋಟಿ ಬಾಕಿ ಉಳಿಸಿಕೊಂಡಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಶಿವರಾಮ ಹೆಬ್ಬಾರ್ ಅವರು ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಭಾನುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರತಿವರ್ಷ ಎನ್‌ಡಬ್ಲುಕೆಆರ್‌ಟಿಸಿ ವ್ಯಾಪ್ತಿಯ ಒಂಬತ್ತು ಜಿಲ್ಲೆಗಳ ಸುಮಾರು 5.36 ಲಕ್ಷ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ರಿಯಾಯತಿ ದರದಲ್ಲಿ ಬಸ್ ಪಾಸ್ ವಿತರಿಸುತ್ತದೆ. ಇದಕ್ಕೆ ತಗಲುವ ವೆಚ್ಚದಲ್ಲಿ ಶೇ 50ರಷ್ಟು ರಾಜ್ಯ ಸರ್ಕಾರ ಭರಿಸಬೇಕು. ಆದರೆ, ಸರ್ಕಾರ ಶೇ 8ರಷ್ಟು ಹಣವನ್ನು ಮಾತ್ರ ಪಾವತಿಸುತ್ತಿದೆ. ಇದು ನಿಗಮದ ಆದಾಯಕ್ಕೆ ದೊಡ್ಡ ಹೊಡೆತ ನೀಡಿದಂತಾಗಿದೆ. ಕಳೆದ ಅನೇಕ ವರ್ಷಗಳಿಂದ ಅಂದಾಜು₹ 400 ಕೋಟಿ ಹಣ ಸರ್ಕಾರದಿಂದ ಬಾಕಿ ಇದೆ. ಇದರಿಂದಾಗಿ ನಿಗಮದ ಸಿಬ್ಬಂದಿಗೆ ಕೊಡಬೇಕಾಗಿರುವ ವಿವಿಧ ಭತ್ಯೆಗಳು ಬಾಕಿ ಉಳಿದಿವೆ. ₹ 70 ಕೋಟಿಯನ್ನು ಸಿಬ್ಬಂದಿಗೆ ನೀಡುವುದು ವಿಳಂಬವಾಗಿದೆ. ರಾಜ್ಯ ಸರ್ಕಾರ ಆದಷ್ಟು ಶೀಘ್ರ ಈ ಹಣ ಜಮಾ ಮಾಡಬೇಕು’ ಎಂದು ಒತ್ತಾಯಿಸಿದರು.

‘ನಿಗಮವು ಇಡೀ ಉತ್ತರ ಕರ್ನಾಟಕದಲ್ಲಿ ರಸ್ತೆ ಸಾರಿಗೆಯೇ ಮುಖ್ಯ ಸಂಚಾರ ಸಾಧನವಾಗಿದೆ. ಶೇ 95ರಷ್ಟು ಜನರು ಸಾರಿಗೆ ಸಂಸ್ಥೆಯ ಬಸ್‌ಗಳನ್ನೇ ಅವಲಂಬಿಸಿದ್ದಾರೆ. ದಿನಕ್ಕೆ  ಸುಮಾರು 24ಲಕ್ಷಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಾರೆ. ನಿಗಮಕ್ಕೆ ಬರಬೇಕಾದ ಬಾಕಿ ಸಂದಾಯವಾಗದಿದ್ದರೆ ಗುಣಮಟ್ಟದ ಸೇವೆ ನೀಡುವುದಾದರೂ ಹೇಗೆ? ಇನ್ನಷ್ಟು ಸೌಲಭ್ಯಗಳನ್ನು ಒದಗಿಸಬೇಕು ಎಂಬ ಸಾರ್ವಜನಿಕರ ಬೇಡಿಕೆಗೆ ಸ್ಪಂದಿಸುವುದು ಸಾಧ್ಯವಾಗುವುದಿಲ್ಲ. ಉತ್ತರ ಕರ್ನಾಟಕ ಹಿಂದುಳಿದಿದೆ ಎಂಬ ಕೂಗಿಗೆ ಸರ್ಕಾರದ ಈ ನಡೆ ಪರೋಕ್ಷ ಕಾರಣವಾಗಬಹುದು. ಜೂನ್ 7ರಂದು ಮುಖ್ಯಮಂತ್ರಿ ಕರೆದಿರುವ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಲಾಗುವುದು’ ಎಂದೂ ಹೇಳಿದರು.

‘ನಾನು ಆಪರೇಷನ್ ಕಮಲಕ್ಕೆ ಒಳಗಾಗುವುದು ಸತ್ಯಕ್ಕೆ ದೂರವಾದ ಸಂಗತಿ. ಈ ಸಂಬಂಧ ಅನೇಕರು ನನ್ನನ್ನು ಭೇಟಿ ಮಾಡಿದ್ದಾರೆ, ಆದರೆ ಈ ಬಗ್ಗೆ ನಿರ್ಧಾರ ಮಾತ್ರ ನನ್ನದೇ ಆಗಿರುತ್ತದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !