ಬೆಳೆ ಸಾಲ ಮನ್ನಾ: ₹1495 ಕೋಟಿ ಬಿಡುಗಡೆ

7

ಬೆಳೆ ಸಾಲ ಮನ್ನಾ: ₹1495 ಕೋಟಿ ಬಿಡುಗಡೆ

Published:
Updated:

ಬೆಂಗಳೂರು: ಸಹಕಾರ ಸಂಘ ಮತ್ತು ಬ್ಯಾಂಕ್‌ಗಳಲ್ಲಿ ರೈತರು ಪಡೆದಿದ್ದ ಅಲ್ಪಾವಧಿ ಬೆಳೆ ಸಾಲದ ಮನ್ನಾ ಯೋಜನೆಯ ಎರಡನೇ ಕಂತಿನ ₹ 1495.65 ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

2017ರಲ್ಲಿ ಸಿದ್ದರಾಮಯ್ಯ ಸರ್ಕಾರ ₹ 50 ಸಾವಿರವರೆಗಿನ ಅಲ್ಪಾವಧಿ ಬೆಳೆ ಸಾಲ ಮನ್ನಾ ಘೋಷಣೆ ಮಾಡಿತ್ತು. ಈ ಯೋಜನೆಯಡಿ 2018–19 ನೇ ಸಾಲಿನ ಆಯವ್ಯಯದಲ್ಲಿ ₹ 4000 ಕೋಟಿ ಅನುದಾನ ಕಲ್ಪಿಸಲಾಗಿದೆ. ಪರಿಷ್ಕೃತ ಆಯವ್ಯಯ ಸಾಮಾನ್ಯದ ಅಡಿ ₹ 3918 ಕೋಟಿ ಹಾಗೂ ಗಿರಿಜನ ಉಪಯೋಜನೆಯಡಿ ₹81.73 ಕೋಟಿ ಹಂಚಿಕೆ ಮಾಡಲಾಗಿದೆ.

ಮೊದಲ ಕಂತಿನಲ್ಲಿ ₹1000 ಕೋಟಿ ಅನುದಾನ ಬಿಡುಗಡೆ ಮಾಡಲಾಗಿತ್ತು. ಈ ಹಣ ಬಳಕೆ ಮಾಡಿಕೊಂಡಿರುವ ಬಗ್ಗೆ ಬಳಕೆ ಪ್ರಮಾಣ ಪತ್ರ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !