ಭಾನುವಾರ, ಏಪ್ರಿಲ್ 11, 2021
33 °C
ಕಾಲಮಿತಿಯಲ್ಲಿ ಯೋಜನೆ ಜಾರಿ; ಇಲಾಖಾ ಮುಖ್ಯಸ್ಥರಿಗೆ ಎಚ್‌.ಡಿ.ಕುಮಾರಸ್ವಾಮಿ ಎಚ್ಚರಿಕೆ

ಎಸ್‌ಸಿ/ಎಸ್‌ಟಿ ಅಭಿವೃದ್ಧಿಗೆ ₹29 ಸಾವಿರ ಕೋಟಿ ಅನುದಾನ ಬಳಕೆ: ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕಾರ್ಯಗಳಿಗೆ ಈ ಸಾಲಿಗೆ ನಿಗದಿಯಾಗಿರುವ ₹29 ಸಾವಿರ ಕೋಟಿ  ಅನುದಾನವನ್ನು ಇದೇ ವರ್ಷದಲ್ಲಿ ಸಂಪೂರ್ಣವಾಗಿ ಖರ್ಚು ಮಾಡಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಬೇಕು. ಯೋಜನೆಗಳ ಅನುಷ್ಠಾನಗೊಳ್ಳದಿದ್ದರೆ  ಆಯಾ ಇಲಾಖಾ ಮುಖ್ಯಸ್ಥರನ್ನು ಹೊಣೆಗಾರರನ್ನಾಗಿಸಲಾಗುವುದು. ಹಾಗಾಗಿ ಅಧಿಕಾರಿಗಳು ಶಿಕ್ಷೆಗೆ ಒಳಪಡದೆ, ಯೋಜನೆಗಳ ಅನುದಾನವನ್ನು ನಿಗದಿತ ಅವಧಿಯಲ್ಲಿ ಖರ್ಚು ಮಾಡುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಎಲ್ಲ ಇಲಾಖೆ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದರು. 

ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಕುರಿತಂತೆ ಇಂದು ನಡೆದ ರಾಜ್ಯ ಪರಿಷತ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. 

ಇಲಾಖಾ ಅಧಿಕಾರಿಗಳು ಯೋಜನೆಗಳ ಅನುಷ್ಠಾನದಲ್ಲಿ ದುರ್ಬಳಕೆಗೆ ಅವಕಾಶ ನೀಡದೆ, ಸರ್ಕಾರದ ಯೋಜನೆಗಳನ್ನು ಪ್ರತಿ ಅರ್ಹ ಫಲಾನುಭವಿಗೆ ತಲುಪಿಸಬೇಕು. ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ  ರಾಜ್ಯದಲ್ಲಿ ದೊಡ್ಡ ಮಟ್ಟದ ಬದಲಾವಣೆಯಾಗುವ ನಿಟ್ಟಿನಲ್ಲಿ ಅಧಿಕಾರಿಗಳು ಸಹಕರಿಸಬೇಕು ಎಂದರು. ಯೋಜನೆಗಳ ಅನುಷ್ಠಾನದಲ್ಲಿರುವ ನ್ಯೂನತೆಗಳನ್ನು ನೀಡಲಾಗಿರುವ ಸೂಚನೆಗಳಿಗೆ ಅನುಸಾರವಾಗಿ ಸರಿಪಡಿಸುವಂತೆ ಅವರು ಸೂಚಿಸಿದರು.  

ಯೋಜನೆಗಳ ಫಲಾನುಭವಿಗಳ ಆಯ್ಕೆಗೆ ಸಂಬಂಧಿಸಿದಂತೆ ಮಾರ್ಗಸೂಚಿಯನ್ನು ಸಿದ್ಧಪಡಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. 

ಸಭೆಯಲ್ಲಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್, ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ, ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ,  ಸಂಸದ ಧೃವನಾರಾಯಣ, ಶಾಸಕರಾದ ಡಾ: ಕೆ.ಅನ್ನದಾನಿ, ಡಾ:ಜಿ.ಉಮೇಶ್ ಯಾದವ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಸಮಾಜ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಂ. ಲಕ್ಷ್ಮೀನಾರಾಯಣ ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು