ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10 ತಿಂಗಳ ಮಗುವಿಗೆ ಕೋವಿಡ್-19 ದೃಢ: ದ.ಕ. ಜಿಲ್ಲೆಯಲ್ಲಿ 6ನೇ ಪ್ರಕರಣ

Last Updated 27 ಮಾರ್ಚ್ 2020, 11:06 IST
ಅಕ್ಷರ ಗಾತ್ರ

ಮಂಗಳೂರು: ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ 10 ತಿಂಗಳ ಮಗುವಿಗೆ ಕೋವಿಡ್-19 ದೃಢಪಟ್ಟಿದೆ.

ಉಸಿರಾಟದ ತೊಂದರೆ, ಜ್ವರದಿಂದಾಗಿ ಮಗುವನ್ನು ಇದೇ 23 ರಂದು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. 24 ರಂದು ಮಗುವಿನ ಗಂಟಲು ದ್ರವದ ಮಾದರಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ವರದಿ ಬಂದಿದ್ದು, ಕೋವಿಡ್ -19 ದೃಢಪಟ್ಟಿದೆ.

ಮುಂಜಾಗ್ರತಾ ಕ್ರಮವಾಗಿ ಸಜಿಪನಡು ಗ್ರಾಮದಲ್ಲಿ ಅಗತ್ಯ ಮುಂಜಾಗ್ರತೆ ಕೈಗೊಳ್ಳಲಾಗಿದೆ. ಮಗುವಿನ ಹತ್ತಿರದ ಸಂಬಂಧಿಗಳನ್ನು ವೈದ್ಯಕೀಯ ನಿಗಾದಲ್ಲಿ ಇರಿಸಲಾಗಿದೆ. ಮಗುವಿನ ಸಂಪರ್ಕದ ಕುರಿತು‌ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಮಗುವಿನ ಆರೋಗ್ಯ ಸ್ಥಿರವಾಗಿದೆ ಎಂದು ಜಿಲ್ಲಾಧಿಕಾರಿ‌ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT