ಕಲಬುರ್ಗಿ: ಹೈದರಾಬಾದ್–ಕರ್ನಾಟಕ ಪ್ರದೇಶದಲ್ಲಿಯ ಸರ್ಕಾರಿ ಕಚೇರಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರನ್ನು, ಅವರು ನೇಮಕವಾದ ದಿನಾಂಕದಿಂದ 10 ವರ್ಷಗಳವರೆಗೆ ಬೇರೆಡೆ ವರ್ಗಾವಣೆ ಮಾಡುವಂತಿಲ್ಲ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಎಲ್ಲ ಸಕ್ಷಮ ಪ್ರಾಧಿಕಾರಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

‘ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಕೆಲಸ ಮಾಡುತ್ತಿರುವ ವಿವಿಧ ವೃಂದದ ನೌಕರರು ನೇಮಕವಾದ ಕೆಲವೇ ವರ್ಷಗಳಲ್ಲಿ ಬೇರೆಡೆ ವರ್ಗಾವಣೆ ಮಾಡಿಸಿಕೊಂಡು ಹೋಗುತ್ತಿದ್ದಾರೆ.ಅವರ ವರ್ಗಾವಣೆಯಿಂದ ತೆರವಾದ ಹುದ್ದೆಗಳಿಗೆ ಬೇರೆಯವರು ಬರುತ್ತಿಲ್ಲ. ಹೀಗಾಗಿ, ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ’ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಇತ್ತೀಚೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು.

ಇದಕ್ಕೆ ಸ್ಪಂದಿಸಿದ ರಾಜ್ಯ ಸರ್ಕಾರ ಜೂನ್ 20ರಂದು ಈ ಆದೇಶ ಹೊರಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.