ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವ್ಯಕ್ತಿತ್ವ ವಿಕಸನಕ್ಕೆ ಪಠ್ಯೇತರ ಚಟುವಟಿಕೆ ಮುಖ್ಯ

ಮಕ್ಕಳ ಬೇಸಿಗೆ ಶಿಬಿರದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶೇಖ್ ಎಂ. ಅಸರಾರ್ ಹೇಳಿಕೆ
Last Updated 11 ಏಪ್ರಿಲ್ 2018, 12:41 IST
ಅಕ್ಷರ ಗಾತ್ರ

ರಾಯಚೂರು: ಶಿಕ್ಷಣದ ಜೊತೆಗೆ ಸಂಗೀತ, ನೃತ್ಯ ಸೇರಿದಂತೆ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ಭಾಗವಹಿಸಿ ಮಕ್ಕಳ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶೇಖ್ ಎಂ. ಅಸರಾರ್ ಅವರು ತಿಳಿಸಿದರು.

ನಗರದ ಕರ್ನಾಟಕ ಬಾಲವಿಕಾಸ ಅಕಾಡೆಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಸುಧಾರಣಾ ಸಂಸ್ಥೆ, ಬಾಲಕರ ಬಾಲಮಂದಿರ, ಬಾಲಕಿಯರ ಬಾಲಮಂದಿರದಿಂದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಆಯೋಜಿಸಿದ ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಮಂಗಳಾ ಹೆಗಡೆ ಮಾತನಾಡಿ, ಸೃಜನಾತ್ಮಕ ಕಲಿಕೆಯಿಂದ ಮಕ್ಕಳ ವ್ಯಕ್ತಿತ್ವ ವೃದ್ಧಿಯಾಗುತ್ತದೆ ಎಂದರು.

ಮಕ್ಕಳಲ್ಲಿ ಮಾನವೀಯ ಮೌಲ್ಯಗಳು ಕಣ್ಮರೆಯಾಗುತ್ತಿರುವ ಈ ಆಧುನಿಕ ಯುಗದಲ್ಲಿ ಮಾನವೀಯ ಮೌಲ್ಯ ಸೇರಿದಂತೆ ಇನ್ನಿತರೆ ಪಾಠ ಪ್ರವಚನಗಳ ಜೊತೆಗೆ ಆಟ ಪಾಠಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಶಿಬಿರವು ಸಹಕಾರಿಯಾಗಲಿದೆ. ಏಳು ದಿನಗಳ ಕಾಲ ನಡೆಯಲಿರುವ ಶಿಬಿರದಲ್ಲಿ ಮಕ್ಕಳಿಗೆ ಸಂಗೀತ, ಕ್ರೀಡೆ ಹಾಗೂ ಉಪನ್ಯಾಸ ಮಾಲೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

‘ವಿದ್ಯಾಭ್ಯಾಸದ ಜೊತೆಗೆ ಇಂಥಹ ವೈವಿಧ್ಯಮಯವಾದ ಮನೋರಂಜನಾ ಭರಿತ ಚಟುವಟಿಕೆ ಗಳನ್ನು ಹಮ್ಮಿ ಕೊಳ್ಳುವುದರಿಂದ ವ್ಯಕ್ತಿಯ ವಿಕಾಸಕ್ಕೆ ದಾರಿಯಾಗುತ್ತದೆ. ಮಕ್ಕಳಲ್ಲಿ ಅಡಗಿರುವ ಹೊಸತನದ ಕಲಿಕೆ ಪ್ರಕ್ರಿಯೆ ವೃದ್ಧಿಯಾಗುತ್ತದೆ. ಮಕ್ಕಳ ದೈಹಿಕ ಮಾನಸಿಕ ಭಾವನಾತ್ಮಾಕ ಸಾಮಾಜಿಕ ಬೆಳವಣಿಗೆಗೆ ಪ್ರೋತ್ಸಾಹ ನೀಡಿದಂತಾಗುತ್ತದೆ’ ಎಂದು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಬಸವರಾಜ ಬ್ಯಾಗವಾಟ, ಸತೀಶ ಫನಾಂಡಿಸ್, ಪ್ರಭುದೇವ ಪಾಟೀಲ ಮಾತನಾಡಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜ್ಯೋತಿ ನಿರೂಪಿಸಿದರು.ಶ್ರೀದೇವಿ ಸ್ವಾಗತಿಸಿದರು. ಬಾಲಕರ ಬಾಲ ಮಂದಿರದ ಅಧೀಕ್ಷಕ ಗುರುಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಾಲಕಿಯರ ಬಾಲಮಂದಿರ ಅಧೀಕ್ಷಕ ಸೈಯದ್ ಪಾಷಾ ವಂದಿಸಿದರು.

ಸುಧಾರಣಾ ಸಂಸ್ಥೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಶಿವರಾಜ್. ಕಿರಲಿಂಗಪ್ಪ. ರಮೇಶ ಎಂ. ಸಿದ್ದಯ್ಯ. ನರಸಿಂಹ. ಈರಮ್ಮ. ದಿನೇಶ್ ವಿಜಯ. ಮೀರಾಜೋಷಿ. ಈರಮ್ಮ . ಅಂಬಮ್ಮ, ಶರಣಮ್ಮ ಇದ್ದರು.

**

ಬೇಸಿಗೆ ಶಿಬಿರದಲ್ಲಿ ವಿದ್ಯಾರ್ಥಿಗಳು ಪುಸ್ತಕ ಓದುವುದು ಸೇರಿದಂತೆ ಇನ್ನಿತರ ಆಟ, ಪಾಠಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು – ಬಸವರಾಜ್ ಬ್ಯಾಗವಾಟ್, ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಸದಸ್ಯ

**

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT