ಶುಕ್ರವಾರ, ಡಿಸೆಂಬರ್ 6, 2019
21 °C

ಮಳೆ ಕೊರತೆಯಿಂದ 11 ಲಕ್ಷ ಹೆಕ್ಟೇರ್ ಬೆಳೆ ಹಾನಿ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ 11 ಲಕ್ಷ ಹೆಕ್ಟೇರ್ ಬೆಳೆ ನಷ್ಟವಾಗಿದ್ದರೆ, ಪ್ರವಾಹದಿಂದ 20 ಸಾವಿರ ಹೆಕ್ಟೇರ್ ಹಾಗೂ ಸೈನಿಕ ಹುಳುವಿನ ಬಾಧೆಯಿಂದ 86 ಸಾವಿರ ಹೆಕ್ಟೇರ್ ಬೆಳೆ ಹಾನಿಯಾಗಿದೆ.

ಕೃಷಿ ಇಲಾಖೆ ಅಧಿಕಾರಿಗಳು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ನೀಡಿದ ಮಾಹಿತಿ ಇದು. ವಿಧಾನಸೌಧದಲ್ಲಿ ಅಧಿಕಾರಿಗಳ ಜತೆ ಶನಿವಾರ ಸಭೆ ನಡೆಸಿದ ಅವರು, ಕೃಷಿ ಚಟುವಟಿಕೆ ಹಾಗೂ ಇಲಾಖೆಯ ಕಾರ್ಯವೈಖರಿ ಬಗ್ಗೆ ಮಾಹಿತಿ ಪಡೆದುಕೊಂಡರು.

‘ಮಲೆನಾಡು ಭಾಗಗಳಲ್ಲಿ ಈ ಬಾರಿ ಶೇ 32ರಷ್ಟು ಹಾಗೂ ಕರಾವಳಿ ಭಾಗದಲ್ಲಿ ಶೇ 10ರಷ್ಟು ಅಧಿಕ ಮಳೆಯಾಗಿದೆ. ಗದ್ದೆ ಹಾಗೂ ತೋಟಗಳು ಜಲಾವೃತಗೊಂಡು ಅರ್ಧದಷ್ಟು ಬೆಳೆ ಸಂಪೂರ್ಣ ಹಾಳಾಗಿದೆ’ ಎಂಬ ಸಂಗತಿಯನ್ನು ಅಧಿಕಾರಿಗಳು ಮುಖ್ಯಮಂತ್ರಿ ಅವರ ಗಮನಕ್ಕೆ ತಂದರು.

‘ಬೆಳೆನಷ್ಟದ ಕುರಿತು ಸಮೀಕ್ಷೆ ನಡೆಸಿರುವ ಅಧಿಕಾರಿಗಳು, ಸೋಮವಾರ ಮಧ್ಯಂತರ ವರದಿ ನೀಡಲಿದ್ದಾರೆ. ಆ.31ರಂದು ನಡೆಯಲಿರುವ ಸಂಪುಟ ಸಭೆಯಲ್ಲಿ ಆ ವರದಿ ಪ್ರಸ್ತಾಪಿಸಲಾಗುವುದು. ನಂತರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ಕುಮಾರಸ್ವಾಮಿ ಹೇಳಿದರು.

30 ಸಾವಿರ ಕೃಷಿ ಹೊಂಡ

‘ಕೃಷಿಭಾಗ್ಯ ಯೋಜನೆಯಡಿ ಈ ವರ್ಷ 70 ಸಾವಿರ ಕೃಷಿ ಹೊಂಡ ನಿರ್ಮಿಸಲು ಉದ್ದೇಶಿಸಲಾಗಿದ್ದು, ಈವರೆಗೆ 30 ಸಾವಿರ ಹೊಂಡಗಳ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿದೆ. 2018–19ನೇ ಸಾಲಿನಲ್ಲಿ ಮಂಡಿಸಲಾದ ಎರಡು ಬಜೆಟ್‌ಗಳಲ್ಲಿ, ಕೃಷಿ ಇಲಾಖೆಗೆ ಸಂಬಂಧಿಸಿದ 26 ಕಾರ್ಯಕ್ರಮಗಳನ್ನು ಘೋಷಿಸಲಾಗಿತ್ತು. ಆ ಪೈಕಿ ಈಗಾಗಲೇ 13 ಕಾರ್ಯಕ್ರಮಗಳ ಜಾರಿಗೆ ಆದೇಶ ಹೊರಡಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು