ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಈವರೆಗೆ 110 ಕೊರೊನಾ ಪ್ರಕರಣ ದೃಢ, 9 ಜನರು ಗುಣಮುಖ

Last Updated 1 ಏಪ್ರಿಲ್ 2020, 17:29 IST
ಅಕ್ಷರ ಗಾತ್ರ

ಬೆಂಗಳೂರು: ವಿಶ್ವದಾದ್ಯಂತ ತೀವ್ರವಾಗಿ ಬಾಧಿಸುತ್ತಿವ ಕೊರೊನಾ ವೈರಸ್ ಹಾವಳಿ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಲೇ ಇದ್ದು, ರಾಜ್ಯದಲ್ಲೂ ಭಾದಿತರ ಸಂಖ್ಯೆ ಬೆಳೆಯುತ್ತಲೇ ಸಾಗಿದೆ. ರಾಜ್ಯದಲ್ಲಿ ಈವರೆಗೆ 110 ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು, ಮೂವರು ಮೃತಪಟ್ಟಿದ್ದಾರೆ.

ಈ ಕುರಿತು ಆರೋಗ್ಯ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಹೊಸದಾಗಿ 9 ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆಯು 110ಕ್ಕೆ ಏರಿಕೆಯಾಗಿದೆ. ಈ ಪ್ರಕರಣಗಳಲ್ಲಿ ಈವರೆಗೆ 9 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 98 ಪ್ರಕರಣಗಳ ಪೈಕಿ ಒಬ್ಬರು ಗರ್ಭಿಣಿಯಾಗಿದ್ದು, ಪ್ರತ್ಯೇಕವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಮತ್ತು ಮೂವರನ್ನು ಐಸಿಯುನಲ್ಲಿ ಇಡಲಾಗಿದೆ ಎಂದು ತಿಳಿಸಿದೆ.

ಪ್ರಕರಣ 102: ಬೆಂಗಳೂರಿನ ನಿವಾಸಿಯಾಗಿರುವ 24 ವರ್ಷದ ವ್ಯಕ್ತಿಯನ್ನು ಪ್ರತ್ಯೇಕವಾಗಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಇವರ ವಿವರವಾದ ತನಿಖೆಯು ಪ್ರಗತಿಯಲ್ಲಿದೆ.

ಪ್ರಕರಣ 103: ಮೈಸೂರಿನ ನಿವಾಸಿ 37 ವರ್ಷದ ವ್ಯಕ್ತಿಯಲ್ಲಿ ಕೋವಿಡ್-19 ದೃಢಪಟ್ಟಿದ್ದು, ಪ್ರಕರಣ 52ರ ವ್ಯಕ್ತಿ ಕಾರ್ಯನಿರ್ವಹಿಸುತ್ತಿದ್ದ ಔಷಧ ತಯಾರಿಕೆ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈತನನ್ನು ಪ್ರತ್ಯೇಕವಾಗಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಕರಣ 104: 27 ವರ್ಷದ ವ್ಯಕ್ತಿಯು ನಂಜನಗೂಡು ನಿವಾಸಿ. ಪ್ರಾಥಮಿಕ ತನಿಖೆಯ ಪ್ರಕಾರ ಪ್ರಕರಣ 52ರ ವ್ಯಕ್ತಿ ಕೆಲಸ ಮಾಡುತ್ತಿದ್ದ ಔಷಧ ತಯಾರಿಕೆ ಕಂಪನಿಯಲ್ಲೇ ಕಾರ್ಯ ನಿರ್ವಹಿಸುತ್ತಿದ್ದರು. ಇವರಿಗೆ ಕೋವಿಡ್-19 ದೃಢಪಟ್ಟಿದ್ದು, ಮೈಸೂರಿನ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಕರಣ 105: ಬೆಂಗಳೂರಿನ 33 ವರ್ಷದ ಪುರುಷ. ಪ್ರಕರಣ 103ರ ಸಂಪರ್ಕಕ್ಕೆ ಬಂದಿದ್ದ ವ್ಯಕ್ತಿ. ಇವರನ್ನು ಮೈಸೂರಿನ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಕರಣ 106: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ 49 ವರ್ಷದ ವ್ಯಕ್ತಿಯು ದುಬೈನಿಂದ ಮಾರ್ಚ್ 20ರಂದು ಭಾರತಕ್ಕೆ ಹಿಂದಿರುಗಿದ್ದರು. ಇವರನ್ನು ಪುತ್ತೂರು ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಲಾಗಿದೆ.

ಪ್ರಕರಣ 107: ಬೆಂಗಳೂರು ನಿವಾಸಿಯಾಗಿರುವ 26 ವರ್ಷದ ವ್ಯಕ್ತಿಯು ಸ್ಪೇನ್‌ನಿಂದ ಮಾರ್ಚ್ 18ಕ್ಕೆ ಭಾರತಕ್ಕೆ ಹಿಂದಿರುಗಿದ್ದರು. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನ 40 ವರ್ಷದ ಮಹಿಳೆ. ಚಿಕ್ಕಬಳ್ಳಾಪುರದ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಲಾಗಿದೆ. ಬೆಂಗಳೂರಿನ ನಿಗಧಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಕರಣ 108-ಕೆ: 63 ವರ್ಷದ ಕೇರಳ ರಾಜ್ಯದ ನಿವಾಸಿಯಾಗಿರುವ ವ್ಯಕ್ತಿಯು ಜರ್ಮನಿಗೆ ಪ್ರಯಾಣಿಸಿದ್ದರು. ಮಾರ್ಚ್ 21ರಂದು ಬೆಂಗಳೂರಿಗೆ ಹಿಂತಿರುಗಿದ್ದಾರೆ. ಇವರನ್ನು ನೇರವಾಗಿ ಕ್ವಾರಂಟೈನ್‌ಗೆ ಒಳಪಡಿಸಲಾಗಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಲಾಗಿದೆ.

ಪ್ರಕರಣ 109: ಮೈಸೂರು ಜಿಲ್ಲೆಯ 63 ವರ್ಷದ ಪುರುಷ ಪ್ರಕರಣ 52ರ ಸಂಪರ್ಕ ಹೊಂದಿದ್ದರು. ಇವರ ಆರೋಗ್ಯ ಸ್ಥಿರವಾಗಿದ್ದು, ಮೈಸೂರಿನ ನಿಗದಿತ ಅಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಲಾಗಿದೆ.

ಪ್ರಕರಣ 110: ಮೈಸೂರಿನ ನಿವಾಸಿಯಾಗಿರುವ 27 ವರ್ಷದ ಮಹಿಳೆ ( ಪ್ರಕರಣ 52ರ ಹೆಂಡತಿ) ಆರೋಗ್ಯ ಸ್ಥಿರವಾಗಿದ್ದು, ಮೈಸೂರಿನ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಲಾಗಿರುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT