ಶನಿವಾರ, ಏಪ್ರಿಲ್ 4, 2020
19 °C

ಬೆಂಗಳೂರಿನ ಮಹಿಳೆಗೆ ಕೋವಿಡ್‌–19 ದೃಢ: ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದುಬೈನಿಂದ ಬಂದ ಬೆಂಗಳೂರಿನ ಮಹಿಳೆಗೆ ಕೋವಿಡ್‌–19 ದೃಢಪಟ್ಟಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. 

67 ವರ್ಷದ ಮಹಿಳೆ ಮಾರ್ಚ್‌ 9ರಂದು ದುಬೈನಿಂದ, ಗೋವಾ ಮಾರ್ಗವಾಗಿ ಬೆಂಗಳೂರಿಗೆ ಬಂದಿದ್ದರು. ಮಹಿಳೆಗೆ ಕಿಡ್ನಿಗೆ ಸಂಬಂಧಿಸಿದ ತೀವ್ರ ಸಮಸ್ಯೆಯೂ ಇದೆ. ಬೆಂಗಳೂರಿಗೆ ಬಂದಾಗಿನಿಂದ ಆಕೆಯನ್ನು ಮನೆಯಲ್ಲೇ ಇರಿಸಲಾಗಿತ್ತು. ಮಾ. 16ರಂದು ಅವರು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. 

ಇವರು ತಮ್ಮ ಐವರು ಕುಟುಂಬ ಸದಸ್ಯರೂ ಸೇರಿದಂತೆ 21 ಮಂದಿಯೊಂದಿಗೆ ಪ್ರತ್ಯಕ್ಷ, ಪರೋಕ್ಷ  ಸಂಪರ್ಕಕ್ಕೆ ಬಂದಿದ್ದಾರೆ. ಅವರೆಲ್ಲರನ್ನೂ ಮನೆಯಲ್ಲಿಯೇ ಇರಿಸಿ ನಿಗಾ ವಹಿಸಲಾಗಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು