ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗಿನಲ್ಲಿ 21ರ ತನಕ ನಿಷೇಧಾಜ್ಞೆ: ಖಾಕಿ ಕಣ್ಗಾವಲು

ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಪ್ರತಿಭಟನೆ ಸಾಧ್ಯತೆ
Last Updated 19 ಡಿಸೆಂಬರ್ 2019, 13:54 IST
ಅಕ್ಷರ ಗಾತ್ರ

ಮಡಿಕೇರಿ: ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಕೊಡಗಿನಲ್ಲೂ ಪ್ರತಿಭಟನೆ ನಡೆಯುವ ಸಾಧ್ಯತೆಯಿದ್ದು ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷ್‌ನ್ ಕಾಯ್ದೆ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಗುರುವಾರ ಬೆಳಿಗ್ಗೆಯೇ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ನಿಷೇಧಾಜ್ಞೆ ಜಾರಿ ಮಾಡಿ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲೆಡೆ ಖಾಕಿ ಕಣ್ಗಾವಲು ಇರಿಸಲಾಗಿದೆ.

ಮಡಿಕೇರಿ ನಗರ, ಸೋಮವಾರಪೇಟೆ, ವಿರಾಜಪೇಟೆ ತಾಲ್ಲೂಕಿನ ಜನದಟ್ಟಣೆ ಸ್ಥಳ ಮತ್ತು ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಮೀಸಲು ಪೊಲೀಸ್ ಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಗುರುವಾರ ಬೆಳಿಗ್ಗೆ 6 ಗಂಟೆಯಿಂದ ಡಿ.21ರ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿದೆ. ಯಾವುದೇ ಬಹಿರಂಗಸಭೆ, ಪ್ರತಿಭಟನಾ ಮೆರವಣಿಗೆಗೆ ನಿರ್ಬಂಧ ವಿಧಿಸಲಾಗಿದೆ.

ಪಾಲಿಸಬೇಕಾದ ಷರತ್ತುಗಳು:ನಿಷೇಧಿತ ಅವಧಿಯಲ್ಲಿ ಸರ್ಕಾರಿ ಕಾರ್ಯಕ್ರಮ ಮತ್ತು ಪೂರ್ವ ಯೋಜಿತ ಮದುವೆ, ನಾಮಕರಣ, ಗೃಹಪ್ರವೇಶ ಕಾರ್ಯಕ್ರಮ ಮತ್ತು ದೇವಸ್ಥಾನ, ಪೂಜಾ ಮಂದಿರ, ಚರ್ಚ್, ಮಸೀದಿಗಳಲ್ಲಿ ನಡೆಯುವ ಪ್ರತಿನಿತ್ಯದ ಪ್ರಾರ್ಥನೆಗಳನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಸಭೆ ಸಮಾರಂಭ ಮತ್ತು ಮೆರವಣಿಗೆ ಅವಕಾಶ ಇಲ್ಲ.

ವಿಜಯೋತ್ಸವ , ಪ್ರತಿಭಟನೆ ನಡೆಸುವುದು, ಪಟಾಕಿ ಸಿಡಿಸುವುದು, ಕಪ್ಪುಬಟ್ಟೆ ಧರಿಸಿ ಪ್ರತಿಭಟಿಸುವುದು ಮತ್ತು ಕಪ್ಪು ಅಥವಾ ಯಾವುದೇ ಪ್ರಚೋದನಾಕಾರಿ ಬಾವುಟ ಪ್ರದರ್ಶಿಸುವುದಕ್ಕೆ ನಿಷೇಧ ಹೇರಲಾಗಿದೆ.

ಯಾವುದೇ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಕರಪತ್ರ, ಭಿತ್ತಿಪತ್ರ ಬಳಸುವುದು, ಅಂಟಿಸುವುದು ಅಥವಾ ಹಂಚುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ನಿಷೇಧಿತ ಅವಧಿಯಲ್ಲಿ 5 ಮತ್ತು ಅದಕ್ಕಿಂತ ಮೇಲ್ಪಟ್ಟು ಜನರು ಗುಂಪು ಸೇರಬಾರದು. ಖಾಸಗಿ ವ್ಯಕ್ತಿಗಳು ಯಾವುದೇ ರೀತಿಯ ಆಯುಧ, ಮಾರಣಾಂತಿಕ ಹತ್ಯಾರುಗಳನ್ನು ಹೊಂದಿರುವುದು, ಪ್ರದರ್ಶಿಸುವುದು ಅಥವಾ ಹಿಡಿದುಕೊಂಡು ಓಡಾಡುವುದನ್ನು ನಿಷೇಧಿಸಿದೆ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT