ಶುಕ್ರವಾರ, ಫೆಬ್ರವರಿ 28, 2020
19 °C
ಪೇಜಾವರ ಮಠದ ಸ್ವಾಮೀಜಿ

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಲ್ಲಿ ವಿಶ್ವಪ್ರಸನ್ನ ಶ್ರೀಪಾದರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ರಚಿಸಿರುವ ಟ್ರಸ್ಟ್‌ನಲ್ಲಿ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ಶ್ರೀಪಾದರಿಗೂ ಸ್ಥಾನ ನೀಡಲಾಗಿದೆ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ ನಡೆದ ಚಳವಳಿಯಲ್ಲಿ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಪಾದರು ಮುಂಚೂಣಿಯಲ್ಲಿದ್ದರು. ಇತ್ತೀಚೆಗೆ ಅವರು ಕೃಷ್ಣೈಕ್ಯರಾಗಿದ್ದಾರೆ.

‘ಅಯೋಧ್ಯೆಯ ರಾಮ ಮಂದಿರದ ಅಭಿವೃದ್ಧಿಗೆ ನಾವು ಯೋಜನೆಯನ್ನು ಸಿದ್ಧಪಡಿಸಿದ್ದೇವೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ’ ಎಂಬ ಹೆಸರಿನಲ್ಲಿ ಟ್ರಸ್ಟ್‌ ರಚಿಸಲಾಗಿದೆ’ ಎಂದು ಸಚಿವ ಸಂಪುಟ ಸಭೆಯ ನಂತರ ಬುಧವಾರ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು. ರಾಮ ಮಂದಿರ ನಿರ್ಮಾಣಕ್ಕಾಗಿ ಅಸ್ತಿತ್ವಕ್ಕೆ ಬಂದಿರುವ ಟ್ರಸ್ಟ್‌ನಲ್ಲಿ ದಲಿತ ಸಮುದಾಯದ ವ್ಯಕ್ತಿಯೊಬ್ಬರು ಸೇರಿದಂತೆ 15 ಟ್ರಸ್ಟಿಗಳಿರಲಿದ್ದಾರೆ ಎಂದು ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದರು.

ಇನ್ನಷ್ಟು...

ರಾಮ ಜನ್ಮಭೂಮಿಗೆ ಟ್ರಸ್ಟ್ ರಚನೆ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

ಅಯೋಧ್ಯೆಯಲ್ಲಿ ರಾಮ ಮಂದಿರ: ವಕೀಲ ಪರಾಶರನ್‌ ನಿವಾಸವೇ ಟ್ರಸ್ಟ್‌ ಕಚೇರಿ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು