ಕತಾರ್ (ರಾಯಿಟರ್ಸ್): ವಿಂಬಲ್ಡನ್‌ನಲ್ಲಿ ಎರಡು ಬಾರಿ ಪ್ರಶಸ್ತಿ ಗೆದ್ದುಕೊಂಡಿರುವ ಪೆಟ್ರಾ ಕ್ವಿಟೋವಾ ಅವರು ಕತಾರ್ ಓಪನ್ ಟೆನಿಸ್ ಟೂರ್ನಿಯಲ್ಲಿ ಚಾಂಪಿಯನ್ ಆಗಿದ್ದಾರೆ.

ಈ ಗೆಲುವಿನಿಂದ ಅವರು ಡಬ್ಲ್ಯುಟಿಎ ರ‍್ಯಾಂಕಿಂಗ್‌ನಲ್ಲಿ ಮತ್ತೊಮ್ಮೆ 10ನೇ ಸ್ಥಾನಕ್ಕೆ ಏರಿದ್ದಾರೆ.

ಎರಡು ವರ್ಷದ ಹಿಂದೆ ತಮ್ಮ ಮನೆಯಲ್ಲಿಯೇ ದರೋಡೆಕೋರರ ಚಾಕುವಿನಿಂದ ಇರಿತಕ್ಕೆ ಒಳಗಾಗಿದ್ದ ಅವರು ಟೆನಿಸ್‌ನಿಂದ ದೂರ ಉಳಿದಿದ್ದರು. ಕಣಕ್ಕಿಳಿದ ಬಳಿಕ ಜನವರಿ ತಿಂಗಳಿನಲ್ಲಿ ಆಡಿದ ಮೊದಲ ಟೂರ್ನಿಯಲ್ಲಿಯೇ ಪ್ರಶಸ್ತಿ ಗೆದ್ದುಕೊಂಡಿದ್ದರು. ಸೇಂಟ್ ಪೀಟರ್ಸ್‌ಬರ್ಗ್ ಟೂರ್ನಿಯಲ್ಲಿ ಚಾಂಪಿಯನ್ ಆಗಿದ್ದರು. ಆಗ 21ನೇ ರ‍್ಯಾಂಕಿಂಗ್ ಹೊಂದಿದ್ದರು.

ಮಹಿಳೆಯರ ಸಿಂಗಲ್ಸ್ ವಿಭಾಗದ ಫೈನಲ್ ಪಂದ್ಯದಲ್ಲಿ ಜೆಕ್ ಗಣರಾಜ್ಯದ ಆಟಗಾರ್ತಿ 3–6, 6–3, 6–4ರಲ್ಲಿ ಸ್ಪೇನ್‌ನ ಗಾರ್ಬೈನ್ ಮುಗುರುಜಾ ಅವರನ್ನು ಮಣಿಸಿದ್ದಾರೆ.

ಎರಡು ಗಂಟೆ 16ನಿಮಿಷದ ಪೈಪೋಟಿಯಲ್ಲಿ ಅವರು ಗೆಲುವು ಒಲಿಸಿಕೊಂಡರು. ಮೊದಲ ಸೆಟ್‌ನಲ್ಲಿ ಆರಂಭದಲ್ಲಿಯೇ 5–0ರಲ್ಲಿ
ಹಿಂದಿದ್ದ ಕ್ವಿಟೋವಾ ನಾಲ್ಕನೇ ಶ್ರೇಯಾಂಕದ ಮುಗುರುಜಾ ಅವರಿಗೆ ಪೈಪೋಟಿ ನೀಡಲು ಸಾಧ್ಯವಾಗಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.