ಬುಧವಾರ, ಜನವರಿ 22, 2020
19 °C

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವ ಗುರಿ: ಕಟೀಲ್ ಹೇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ಗುರಿ ಹಾಕಿಕೊಂಡು ಕೆಲಸ ಮಾಡುತ್ತೇನೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.

ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಬಳಿಕ ಅವರು ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು 'ಮುಂಬರುವ ಪಂಚಾಯತ್, ಜಿಲ್ಲಾ ಪಂಚಾಯತ್, ವಿಧಾನಪರಿಷತ್ ಚುನಾವಣೆಯಲ್ಲಿ ಶೇ. 80 ಸ್ಥಾನಗಳನ್ನು ಗೆಲ್ಲುವ ಗುರಿ ಇದೆ' ಎಂದರು.

‘ಕರಾವಳಿಯಿಂದ ಬಂದ ನನಗೆ ರಾಜ್ಯದ ಪರಿಚಯ ಇಲ್ಲ ಎಂಬ ಟೀಕೆಗಳು ಕೇಳಿ ಬಂದಿತ್ತು. ಕಳೆದ ಆರು ತಿಂಗಳಲ್ಲಿ ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೇನೆ. ರಾಜಕೀಯ ಮತ್ತು ಸಾಮಾಜಿಕ ವಿಷಯಗಳ ಅವಲೋಕನ ಮಾಡಿದ್ದೇನೆ‘ ಎಂದು ಹೇಳಿದರು.

‘ಪಕ್ಷದ ಸದಸ್ಯತ್ವ ಅಭಿಯಾನ ಯಶಸ್ವಿಯಾಗಿ ಪೂರ್ಣಗೊಳಿಸಿದ್ದೇವೆ. 55,700 ಮತಗಟ್ಟೆಗಳಲ್ಲಿ 40, 300 ಮತಗಟ್ಟೆಗಳ ಅಧ್ಯಕ್ಷರ ಚುನಾವಣೆ ನಡೆದಿದೆ. ಅದೇ ರೀತಿ 306 ಮಂಡಲಗಳಲ್ಲಿ  265 ಮಂಡಲಗಳು, 37 ಸಂಘಟನಾತ್ಮಕ ಜಿಲ್ಲೆಗಳಲ್ಲಿ 20 ಜಿಲ್ಲೆಗಳಲ್ಲಿ ಅಧ್ಯಕ್ಷರ ಆಯ್ಕೆ ನಡೆದಿದೆ‘ ಎಂದು ನಳಿನ್ ತಿಳಿಸಿದರು.

ಬೆಳಿಗ್ಗೆ ಪಕ್ಷದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಸಚಿವ ಸಿ.ಟಿ.ರವಿ ನಳಿನ್ ಕುಮಾರ್ ಕಟೀಲ್ ಅವರ ಆಯ್ಕೆಯನ್ನು ಪ್ರಕಟಿಸಿದರು. ಚುನಾವಣೆಗೆ  ನಳಿನ್ ಒಬ್ಬರೇ ನಾಮ ಪತ್ರ ಸಲ್ಲಿಸಿದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು