ಮಂಗಳವಾರ, ಜೂನ್ 2, 2020
27 °C

ನಿಜಾಮುದ್ದೀನ್ ಮಸೀದಿಗೆ ತೆರಳಿದ್ದ 19 ಜನ ಇಎಸ್‌ಐ ಆಸ್ಪತ್ರೆಗೆ ದಾಖಲು: ಕಾರಜೋಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಕಲಬುರ್ಗಿ: ದೆಹಲಿಯ ನಿಜಾಮುದ್ದೀನ್ ದರ್ಗಾ ಬಳಿ ನಡೆದ ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಜಿಲ್ಲೆಯ 19 ಜನರನ್ನು ಜಿಲ್ಲಾಡಳಿತವು ಇಎಸ್‌ಐ ಆಸ್ಪತ್ರೆಯ ಕ್ವಾರಂಟೈನ್‌ನಲ್ಲಿ ಇಟ್ಟು, ತೀವ್ರ ನಿಗಾ ವಹಿಸಿದೆ ಎಂದು ಉಪಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ದೆಹಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡವರು ಮುಕ್ತವಾಗಿ ವೈದ್ಯರ ಬಳಿ ಬರಬೇಕು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ತಮ್ಮ ಕುಟುಂಬದ ಹಾಗೂ ಸಮಾಜದ ಆರೋಗ್ಯದ ಸಂರಕ್ಷಣೆಗಾಗಿ ಸ್ವಯಂ ಪ್ರೇರಿತವಾಗಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿ ವೈದ್ಯರ ಬಳಿ ಬಂದು ಆರೋಗ್ಯ ತಪಾಸಣೆಗೊಳಗಾಗಬೇಕು. ಕೊರೊನಾ ನಿಯಂತ್ರಣಕ್ಕಾಗಿ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಆಸ್ಪತ್ರೆಯಲ್ಲಿ ದಾಖಲಾಗಿರುವ 19 ಜನರ ಗಂಟಲು ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳಿಸಿಕೊಡಲಾಗಿದೆ. ಅದರ ಫಲಿತಾಂಶಕ್ಕಾಗಿ ಜಿಲ್ಲಾಡಳಿತ ಕಾಯುತ್ತಿದೆ. 

ದೆಹಲಿಯಿಂದ ಬಂದವರು ಯಾರಾದರೂ ಇದ್ದರೆ ಸ್ವಯಂಪ್ರೇರಿತರಾಗಿ ಮಾಹಿತಿ ನೀಡಿ ತಪಾಸಣೆಗೆ ಒಳಗಾಗಬೇಕು ಎಂದು ಜಿಲ್ಲಾಧಿಕಾರಿ ಶರತ್ ಬಿ. ಅವರೂ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು