ಮಂಗಳವಾರ, ಮೇ 26, 2020
27 °C
ಪ್ರತ್ಯೇಕ ವಾಸಕ್ಕೆ ಆಕ್ರೋಶ ವ್ಯಕ್ತಪಡಿಸಿದ ರೈಲು ಪ್ರಯಾಣಿಕರು

ಕ್ವಾರಂಟೈನ್‌ಗೆ ಒಪ್ಪದೆ 19 ಜನ ದೆಹಲಿಗೆ ವಾಪಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನವದೆಹಲಿಯಿಂದ ಬೆಂಗಳೂರಿಗೆ ವಿಶೇಷ ರೈಲಿನಲ್ಲಿ ಬಂದಿಳಿದ ಪ್ರಯಾಣಿಕರನ್ನು ಜಿಲ್ಲಾಡಳಿತ ಮತ್ತು ಬಿಬಿಎಂಪಿ ಅಧಿಕಾರಿಗಳು ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಿದ್ದಾರೆ. ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ 19 ಮಂದಿಯನ್ನು ದೆಹಲಿಗೆ ವಾಪಸ್ ಕಳುಹಿಸಲಾಗಿದೆ.

ಮಂಗಳವಾರ ರಾತ್ರಿ ನವದೆಹಲಿಯಿಂದ ಹೊರಟ ವಿಶೇಷ ರೈಲಿನಲ್ಲಿ 920ಮಂದಿ ಪ್ರಯಾಣ ಆರಂಭಿಸಿದರು. ಭೋಪಾಲ್, ನಾಗ್ಪುರ, ಸಿಕಂದರಾಬಾದ್, ಗುಂತಕಲ್, ಅನಂತಪುರದಲ್ಲಿ ರೈಲು ನಿಲುಗಡೆ ಇದ್ದ ಕಾರಣ ಹಲವರು ಅಲ್ಲಿ ಇಳಿದಿದ್ದು, 543 ಮಂದಿ ಮಾತ್ರ ಬೆಂಗ
ಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಗುರುವಾರ ಬೆಳಿಗ್ಗೆ ಬಂದರು.

ಎಲ್ಲರನ್ನೂ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಲು ನಗರ ಜಿಲ್ಲಾಡಳಿತ ಮತ್ತು ಬಿಬಿಎಂಪಿ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದರು. 90 ಹೋಟೆಲ್‌ಗಳನ್ನು ಕಾಯ್ದಿರಿಸಿದ್ದರು. ಬಿಬಿಎಂಪಿಯ 10 ತಂಡ ಆರೋಗ್ಯ ತಪಾಸಣೆ ನಡೆಸಲು ಸಜ್ಜಾಗಿತ್ತು. ಪ್ರಯಾಣಿಕರನ್ನು ಹೋಟೆಲ್‌ಗಳಿಗೆ ತಲುಪಿಸಲು ಬಿಎಂಟಿಸಿ ಬಸ್‌ಗಳು ಕೂಡ ಸಿದ್ಧವಾಗಿ ನಿಂತಿದ್ದವು.

ಎಲ್ಲರನ್ನೂ ಕ್ವಾರಂಟೈನ್‌ಗೆ ಒಳಪಡಿ ಸುವ ಪ್ರಕ್ರಿಯೆಯನ್ನು ಅಧಿಕಾರಿಗಳು ಆರಂಭಿಸಿದರು.  ಇದಕ್ಕೆ ವಿರೋಧ ವ್ಯಕ್ತಪಡಿ ಸಿದ 100ಕ್ಕೂ ಹೆಚ್ಚು ಮಂದಿ ಕ್ವಾರಂಟೈನ್‌ಗೆ ಒಳಪಡಲು ನಿರಾಕರಿಸಿದರು. ‘ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಬೇಕು ಎಂಬ ಮಾಹಿತಿ ಇಲ್ಲದ ಕಾರಣ ಬೆಂಗಳೂರಿಗೆ ಬಂದಿದ್ದೇವೆ. ಮೊದಲೇ ಮಾಹಿತಿ ನೀಡಿದ್ದರೆ ಬರುತ್ತಿರಲಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು. 

‘ಕಷ್ಟದ ಕಾರಣ ಹುಟ್ಟೂರಿಗೆ ಬಂದಿದ್ದೇವೆ. ಈಗ ಹಣ ಕೊಟ್ಟು ಕ್ವಾರಂಟೈನ್‌ನಲ್ಲಿ ಇರಬೇಕು ಎಂದರೆ ಏನು ಮಾಡ
ಬೇಕು’ ಎಂದು ಹಲವರು ಕಣ್ಣೀರು ಹಾಕಿದರು. ಇದರಿಂದ ಗೊಂದಲದ ವಾತಾವರಣ ಸೃಷ್ಟಿಯಾಯಿತು.

‘ಗರ್ಭಿಣಿ ಸೊಸೆ ಆಸ್ಪತ್ರೆಗೆ ದಾಖಲಾಗಿದ್ದಾಳೆ. ನೋಡಿಕೊಂಡು ಹೋಗಲು ಬಂದಿದ್ದೇನೆ. ಕ್ವಾರಂಟೈನ್‌ ಬಗ್ಗೆ ಮೊದಲೇ ಮಾಹಿತಿ ನೀಡಿದ್ದರೆ ಬರುತ್ತಿರಲಿಲ್ಲ’ ಎಂದು ಕಾರ್ತಿಕ್ ಎಂಬುವರು ಅಸಮಾಧಾನ ವ್ಯಕ್ತಪಡಿಸಿದರು.

‘ಯಾವುದೇ ಕಾರಣಕ್ಕೂ ಕ್ವಾರಂಟೈನ್‌ಗೆ ಒಳಗಾಗುವುದಿಲ್ಲ’ ಎಂದು ಹಲವರು ಪಟ್ಟು ಹಿಡಿದರು. ಮನವೊಲಿಸಲು ಅಧಿಕಾರಿಗಳು ದಿನವಿಡೀ ಹರಸಾಹಸಪಟ್ಟರು. ಬಳಿಕ ಬಹುತೇಕರು ಒಪ್ಪಿಗೆ ಸೂಚಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು