ಕಾರ್ಮಿಕರ ಉಚಿತ ಬಸ್ ವ್ಯವಸ್ಥೆಗೆ ಕೆಎಸ್ಆರ್‌ಟಿಸಿಗೆ ಕಾಂಗ್ರೆಸ್‌ನಿಂದ ₹1ಕೋಟಿ

ಬೆಂಗಳೂರು: ಕಾರ್ಮಿಕರು, ಮಕ್ಕಳು, ಮಹಿಳೆಯರು ಪ್ರಯಾಣಕ್ಕೆ ಹಣವಿಲ್ಲದೆ, ಪರದಾಡುತ್ತಿರುವುದನ್ನು ಮನಗಂಡು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ವತಿಯಿಂದ ₹1ಕೋಟಿ ದೇಣಿಗೆಯನ್ನು ಕೆಎಸ್ಆರ್‌ಟಿಸಿ ಅಧ್ಯಕ್ಷರಿಗೆ ನೀಡಲಾಗಿದೆ.
ಈ ಸಂಬಂಧ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೊರೊನಾ ಕಾಂಗ್ರೆಸ್ ಪರಿಹಾರ ನಿಧಿಗೆ ಪಕ್ಷದ ಶಾಸಕರು, ಜನಪ್ರತಿನಿಧಿಗಳು, ಮಾಜಿ ಶಾಸಕರು ದೇಣಿಗೆಯಾಗಿ ನೀಡಿದ್ದ ಹಣವನ್ನೂ ಈ ಕೆಲಸಕ್ಕಾಗಿ ಉಪಯೋಗಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ರಾಜಸ್ಥಾನ, ತೆಲಂಗಾಣ, ದೆಹಲಿ, ಉತ್ತರ ಪ್ರದೇಶ, ಮಹಾರಾಷ್ಟ್ರ, ಜಾರ್ಖಂಡ್ ಸೇರಿದಂತೆ ಅನೇಕ ರಾಜ್ಯಗಳ ಪ್ರಯಾಣಿಕರು ತಮ್ಮ ಊರು ತಲುಪಲು ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಿವೆ. ಪ್ರಜೆಗಳ ಬಗ್ಗೆ ಆ ಸರಕಾರಗಳಿಗಿರುವ ಕಾಳಜಿ ಕರ್ನಾಟಕಕ್ಕೆ ಇಲ್ಲ ಎಂದು ಆರೋಪಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.