ಭಾನುವಾರ, ಸೆಪ್ಟೆಂಬರ್ 26, 2021
25 °C

ಕಾಂಗ್ರೆಸ್‌ನಲ್ಲಿ 20 ಶಾಸಕರಿಗೆ ಅತೃಪ್ತಿ ಇದೆ: ಬಿ.ಎಸ್‌.ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ‘ರಾಜ್ಯ ಸರ್ಕಾರದ ಬಗ್ಗೆ ಕಾಂಗ್ರೆಸ್‌ನ 20 ಶಾಸಕರಿಗೆ ಅತೃಪ್ತಿ ಇದ್ದು, ಅವರು ಯಾವ ನಿರ್ಧಾರ ಬೇಕಾದರೂ ತೆಗೆದುಕೊಳ್ಳಬಹುದು, ಕಾದು ನೋಡೋಣ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಬಿಜೆಪಿಯ 104 ಶಾಸಕರು ಇದ್ದಾರೆ. ಕುಂದಗೋಳ ಮತ್ತು ಚಿಂಚೋಳಿ ಕ್ಷೇತ್ರದಲ್ಲಿಯೂ ನೂರಕ್ಕೆ ನೂರಷ್ಟು ಗೆಲ್ಲುತ್ತೇವೆ. ಅಲ್ಲಿಗೆ ಸಂಖ್ಯಾಬಲ 106 ಆಗಲಿದ್ದು, ಮೂರು ಮಂದಿ ಪಕ್ಷೇತರ ಶಾಸಕರ ಬೆಂಬಲವೂ ಇರುವುದರಿಂದ 109ಕ್ಕೆ ಏರಿಕೆಯಾಗಲಿದ್ದು ಸರ್ಕಾರ ರಚನೆಗೆ ಸಹಕಾರಿಯಾಗಲಿದೆ’ ಎಂದರು.

ರಾಜ್ಯ ಸರ್ಕಾರ ಅವಧಿ ಪೂರೈಸುವುದಿಲ್ಲ ಎಂದು ಅವರು ಭವಿಷ್ಯ ನುಡಿದರು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು