ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇ 6 ರಿಂದ ದ್ವಿತೀಯ ಪಿಯು ತರಗತಿ ಆರಂಭ

Last Updated 27 ಫೆಬ್ರುವರಿ 2019, 19:59 IST
ಅಕ್ಷರ ಗಾತ್ರ

ಬೆಂಗಳೂರು: ಮೇ 6 ರಿಂದ ದ್ವಿತೀಯ ಪಿಯು ತರಗತಿಗಳು ಆರಂಭಗೊಳ್ಳಲಿದೆ ಎಂದು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್‌.ಆರ್. ಉಮಾಶಂಕರ್ ತಿಳಿಸಿದರು.

ಈ ಸಂಬಂಧ ಆದೇಶ ಹೊರಡಿಸಲು ಮುಖ್ಯಮಂತ್ರಿಯವರು ಸಮ್ಮತಿ ನೀಡಿದ್ದಾರೆ ಎಂದು ಮಾಧ್ಯಮಗೋಷ್ಠಿಯಲ್ಲಿ ಅವರು ತಿಳಿಸಿದರು.

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪಾಲಿಗೆ ಮಹತ್ವದ ಹಂತವಾಗಿದೆ. ಖಾಸಗಿ ಶಾಲೆಗಳಲ್ಲಿ ಬೇಗನೆ ಬೋಧನೆಯನ್ನು ಆರಂಭಿಸಿ ಉತ್ತಮ ಕೋಚಿಂಗ್‌ ನೀಡುತ್ತವೆ. ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಹಿಂದೆ ಉಳಿಯಬಾರದು. ಇದನ್ನು ಉಪನ್ಯಾಸಕರು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.

ಸರ್ಕಾರಿ ಶಾಲೆಗಳಲ್ಲಿ ಬಡ ವಿದ್ಯಾರ್ಥಿಗಳು ಓದುತ್ತಾರೆ. ಅವರ ಭವಿಷ್ಯವೂ ಉತ್ತಮ ಆಗಬೇಕು. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಿರುತ್ತದೆ ಎಂಬುದು ನಿಜ. ಸಮಯವನ್ನು ಬದಲಿಸಿ ತರಗತಿಗಳನ್ನು ನಡೆಸಬೇಕಾಗುತ್ತದೆ. ಉಪನ್ಯಾಸಕರಿಗೆ ಅನನುಕೂಲ ಆದರೂ ಸಹಕಾರ ನೀಡಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT