ಅರಣ್ಯ ಇಲಾಖೆಯಲ್ಲಿ 3085 ಹುದ್ದೆಗಳ ಭರ್ತಿ

7

ಅರಣ್ಯ ಇಲಾಖೆಯಲ್ಲಿ 3085 ಹುದ್ದೆಗಳ ಭರ್ತಿ

Published:
Updated:

ಬೆಂಗಳೂರು: ಅರಣ್ಯ ಇಲಾಖೆಯ ವಿವಿಧ ದರ್ಜೆಯ 3085 ಹುದ್ದೆಗಳನ್ನು ಹೆಚ್ಚುವರಿಯಾಗಿ ಸೃಷ್ಟಿಸಿದ್ದು, 2019–20 ರ ಸಾಲಿನಲ್ಲಿ ಭರ್ತಿ ಮಾಡಲು ಅನುಮತಿ ನೀಡಲಾಗಿದೆ ಎಂದು ಅರಣ್ಯ ಇಲಾಖೆ ಸಚಿವ ಆರ್‌.ಶಂಕರ್‌ ತಿಳಿಸಿದರು.

ನಗರದ ಅರಣ್ಯ ಭವನದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅರಣ್ಯ ಸಂಪತ್ತು ಮತ್ತು ವನ್ಯಜೀವಿ ಸಂರಕ್ಷಣೆಗಾಗಿ ಹೆಚ್ಚಿನ ಅಧಿಕಾರಿಗಳು ಮತ್ತು ಸಿಬ್ಬಂದಿಯ ಅಗತ್ಯವಿದೆ ಎಂದು ಅವರು ಹೇಳಿದರು.

ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಾಗ ಮರಣ ಹೊಂದಿದರೆ ₹20 ಲಕ್ಷ, ಶಾಶ್ವತ ಅಂಗ ವಿಕಲರಾದರೆ, ₹10 ಲಕ್ಷ ಮತ್ತು ಗಂಭೀರ ಸ್ವರೂಪದ ಗಾಯಗಳಾದರೆ ₹ 2ಲಕ್ಷ ಪರಿಹಾರ ಮತ್ತು ₹ 10 ಲಕ್ಷ ವಿಶೇಷ ಗುಂಪು ವಿಮಾ ಮೊತ್ತವನ್ನು ನೀಡಲಾಗುತ್ತದೆ ಎಂದು ಅವರು ತಿಳಿಸಿದರು.

ಭಾರತೀಯ ಅರಣ್ಯ ಸಮೀಕ್ಷೆ ವರದಿ ಪ್ರಕಾರ 2015–17 ರ ಅವಧಿಯಲ್ಲಿ ರಾಜ್ಯದಲ್ಲಿ ಅರಣ್ಯ ಮತ್ತು ವೃಕ್ಷ ಹೊದಿಕೆಯು 1,26,200 ಹೆಕ್ಟೇರ್‌ಗಳಷ್ಟು ಹೆಚ್ಚಾಗಿದೆ. ಅಲ್ಲದೆ, ವನ್ಯಜೀವಿಗಳಾದ ಆನೆ, ಹುಲಿ ಮತ್ತು ಚಿರತೆಗಳ ಸಂಖ್ಯೆ ಹೆಚ್ಚಾಗಿದೆ. ವನ್ಯಜೀವಿಗಳ ಸಂಖ್ಯೆಯಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಶಂಕರ್‌ ತಿಳಿಸಿದರು.

 ಮಣಿಕಂದನ್‌ ಸ್ಮರಣೆ: ರಾಜೀವ್‌ಗಾಂಧಿ ರಾಷ್ಟ್ರೀಯ ಉದ್ಯಾನವನದ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ನಿರ್ದೇಶಕರಾಗಿದ್ದ ಎಸ್‌.ಮಣಿಕಂದನ್‌ ಅವರು ನಾಗರಹೊಳೆ ಕಾಡ್ಗಿಚ್ಚು ಸಂಭವಿಸಿದ ಸಂದರ್ಭದಲ್ಲಿ ಹಠಾತ್‌ ಕಾಡನೆ ದಾಳಿಗೆ ಸಿಲುಕಿ ಮೃತಪಟ್ಟರು. ತಮ್ಮ ಸೇವಾವಧಿಯಲ್ಲಿ  ಎಂದಕ್ಷ ಮತ್ತು ಪ್ರಾಮಾಣಿಕ ಸೇವೆಗೆ ಹೆಸರುವಾಸಿಯಾಗಿದ್ದರು ಎಂದು ಅವರು ಸ್ಮರಿಸಿದರು.

ಸಾತನೂರು ವಲಯದಲ್ಲಿ ಯಡಮಾರನಹಳ್ಳಿಕೆರೆ ಹತ್ತಿರ ಇದ್ದ ಎಂಟು ಕಾಡಾನೆಗಳನ್ನು ಕಾವೇರಿ ವನ್ಯಜೀವಿ ಧಾಮಕ್ಕೆ ಹಿಮ್ಮೆಟ್ಟಿಸುವಾಗ ಕಾಡಾನೆ ದಾಳಿಯಿಂದ ಮೃತಪಟ್ಟ ಚಿಕ್ಕೀರಯ್ಯ ಅವರನ್ನು ಸೇವೆಯನ್ನೂ ಸಚಿವರು ಸ್ಮರಿಸಿದರು.

 

 

ಬರಹ ಇಷ್ಟವಾಯಿತೆ?

 • 9

  Happy
 • 3

  Amused
 • 3

  Sad
 • 0

  Frustrated
 • 0

  Angry

Comments:

0 comments

Write the first review for this !