ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಲ್ಕು ತಿಂಗಳಲ್ಲಿ 4.25 ಲಕ್ಷ ಆರೋಗ್ಯ ಕಾರ್ಡ್‌ಗಳ ವಿತರಣೆ

Last Updated 16 ಅಕ್ಟೋಬರ್ 2018, 20:02 IST
ಅಕ್ಷರ ಗಾತ್ರ

ಬೆಂಗಳೂರು: ‘ಆರೋಗ್ಯ ಕರ್ನಾಟಕ’ ಯೋಜನೆಯಡಿ ಈವರೆಗೆ 4.25 ಲಕ್ಷ ಆರೋಗ್ಯ ಕಾರ್ಡ್‌ಗಳನ್ನು ವಿತರಿಸಲಾಗಿದೆ.

ಮೊದಲ ಹಂತದಲ್ಲಿ 11 ಪ್ರಮುಖ ಸಾರ್ವಜನಿಕ ಆಸ್ಪತ್ರೆಗಳಲ್ಲಿ ರೋಗಿಗಳ ನೋಂದಣಿ ಮಾಡಿ ಆರೋಗ್ಯ ಕಾರ್ಡ್‌ಗಳ ವಿತರಣೆ ಮಾಡಲಾಗುತ್ತಿದೆ.ಜಿಲ್ಲಾ ಆಸ್ಪತ್ರೆಗಳು, ತಾಲ್ಲೂಕು ಆಸ್ಪತ್ರೆಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ರೋಗಿಗಳ ನೋಂದಣಿಯನ್ನು ಹಂತ–ಹಂತವಾಗಿ ಜಾರಿಗೊಳಿಸಲಾಗುತ್ತದೆ ಎಂದು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಕಾರ್ಯಕಾರಿ ನಿರ್ದೇಶಕಿ ಎನ್‌.ಟಿ.ಆಬ್ರೂ ತಿಳಿಸಿದ್ದಾರೆ.

ಕಾರ್ಡ್‌ಗಳ ಪೂರ್ಣ ವಿತರಣೆ ಆಗುವವರೆಗೆ ರೋಗಿಗಳು ಚಿಕಿತ್ಸೆಗಾಗಿ ಪಡಿತರ ಚೀಟಿ ಮತ್ತು ಆಧಾರ್‌ ಕಾರ್ಡ್‌ಗಳನ್ನು ಬಳಸಬಹುದು. ಈ ಯೋಜನೆಯಡಿ ಪ್ರಾಥಮಿಕ ಆರೋಗ್ಯ ಆರೈಕೆ ಮತ್ತು ಸರಳ ದ್ವಿತೀಯ ಆರೋಗ್ಯ ಆರೈಕೆ ಸೇವೆಗಳನ್ನು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಮಾತ್ರ ಪಡೆದುಕೊಳ್ಳಬಹುದು ಎಂದು ಹೇಳಿದ್ದಾರೆ.

ಈ ವರ್ಷದ ಜೂನ್‌ನಿಂದ ಇಲ್ಲಿಯವರೆಗೆ ಪ್ರಾಥಮಿಕ ಆರೋಗ್ಯ ಸೇವೆಯನ್ನು ಲಕ್ಷಾಂತರ ಜನ ಪಡೆದುಕೊಂಡಿದ್ದಾರೆ. ಸಾಮಾನ್ಯ ದ್ವಿತೀಯ ಆರೋಗ್ಯ ಸೇವೆಗಳಲ್ಲಿ ಒಳರೋಗಿಗಳಾಗಿ 15,24,880 ರೋಗಿಗಳು ಮತ್ತು 1,10,880 ಪ್ರಧಾನ ಚಿಕಿತ್ಸೆಗಳು ಮತ್ತು 1,46,811 ಕಿರಿಯ ಚಿಕಿತ್ಸೆಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT