ಮುರುಘಾ ಶರಣರ ವಿರುದ್ಧದ ವಂಚನೆ ಪ್ರಕರಣ ರದ್ದು

7

ಮುರುಘಾ ಶರಣರ ವಿರುದ್ಧದ ವಂಚನೆ ಪ್ರಕರಣ ರದ್ದು

Published:
Updated:

ಬೆಂಗಳೂರು: ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಹೊಸದುರ್ಗ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ದಾಖಲಾಗಿರುವ ವಂಚನೆ ಪ್ರಕರಣವನ್ನು ಹೈಕೋರ್ಟ್‌ ರದ್ದುಗೊಳಿಸಿದೆ.

ಪ್ರಕರಣ ರದ್ದು ಕೋರಿ ಶರಣರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಆರ್.ಬಿ.ಬೂದಿಹಾಳ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಮಾನ್ಯ ಮಾಡಿದೆ.

‘ಎಸ್‌ಜೆಎಂ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ ಹುದ್ದೆ ಕೋರಿದ್ದೆ. ಇದಕ್ಕೆ ಮಠದವರು ನನ್ನಿಂದ ಹಣ ಪಡೆದಿದ್ದರು. ಆದರೆ ಕೆಲಸ ಕೊಟ್ಟಿಲ್ಲ’ ಎಂದು ಆರೋಪಿಸಿ ಹೊಸದುರ್ಗ ತಾಲ್ಲೂಕಿನ ಮತ್ತೋಡು ಹೋಬಳಿಯ ಹೊರತ್ತಗೊಂಡನಹಳ್ಳಿ ನಿವಾಸಿ ಎಂ.ಪ್ರಶಾಂತ್ ಖಾಸಗಿ ದೂರು ದಾಖಲಿಸಿದ್ದರು.

ಕಾಲಾವಕಾಶ: ಪೀಠಾಧಿಪತಿ ಸ್ಥಾನದಿಂದ ತಮ್ಮನ್ನು ಅನರ್ಹಗೊಳಿಸುವಂತೆ ಕೋರಿ ನಗರದ ಸಿಟಿ ಸಿವಿಲ್‌ ಕೋರ್ಟ್‌ನಲ್ಲಿರುವ ಅಸಲು ದಾವೆ ಪ್ರಶ್ನಿಸಿ ಶಿವಮೂರ್ತಿ ಮುರುಘರಾಜೇಂದ್ರ ಸ್ವಾಮೀಜಿ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆಗೆ ಹೈಕೋರ್ಟ್ ಅಂತಿಮ ಅವಕಾಶ ನೀಡಿದೆ. ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !