ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿಯಲ್ಲಿ 43 ಡಿಗ್ರಿ ಉಷ್ಣಾಂಶ

ಬಿಸಿಗಾಳಿಗೆ ಜನ, ಜಾನುವಾರು ತತ್ತರ
Last Updated 2 ಏಪ್ರಿಲ್ 2019, 19:57 IST
ಅಕ್ಷರ ಗಾತ್ರ

ಕಲಬುರ್ಗಿ: ಜಿಲ್ಲೆಯಲ್ಲಿ ಏಪ್ರಿಲ್‌ ಆರಂಭದಲ್ಲೇ ಉಷ್ಣಾಂಶದಲ್ಲಿ ಹೆಚ್ಚಳವಾಗಿದ್ದು, ಮಂಗಳವಾರ 43 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ. ಏಪ್ರಿಲ್‌ ತಿಂಗಳಲ್ಲಿ ದಾಖಲಾದ ಅತಿ ಹೆಚ್ಚು ಉಷ್ಣಾಂಶ ಇದಾಗಿದೆ.

‘ಎರಡೂವರೆ ತಿಂಗಳ ಕಡು ಬೇಸಿಗೆ ಹೇಗಿರುತ್ತೋ’ ಎನ್ನುತ್ತಿದ್ದಾರೆ ಜನ. ಬೆಳಿಗ್ಗೆ 8 ಗಂಟೆ ಹೊತ್ತಿಗೆ ಆರಂಭವಾಗುವ ಬಿಸಿಲು, ಮಧ್ಯಾಹ್ನದ ವೇಳೆಗೆ ರಸ್ತೆಗಳಲ್ಲಿ ಓಡಾಡುವುದೇ ಕಷ್ಟ ಎನ್ನುವಷ್ಟು ಪ್ರಖರವಾಗಿರುತ್ತದೆ.

ರಾತ್ರಿ ಕನಿಷ್ಠ ಉಷ್ಣಾಂಶ26ರಿಂದ 27 ಡಿಗ್ರಿ ಸೆಲ್ಸಿಯಸ್‌ ಆಸುಪಾಸಿನಲ್ಲಿದೆ. ಏಪ್ರಿಲ್‌ 8ರವರೆಗೂ ಇದೇ ಪರಿಸ್ಥಿತಿ ಇರಲಿದೆ ಎನ್ನುತ್ತದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT