ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

462 ರೈತರ ಆತ್ಮಹತ್ಯೆ: 256 ಮಂದಿಗೆ ಪರಿಹಾರ

Last Updated 21 ಡಿಸೆಂಬರ್ 2018, 19:36 IST
ಅಕ್ಷರ ಗಾತ್ರ

ಬೆಳಗಾವಿ: ರೈತನ ಹೆಸರಿನಲ್ಲಿ ಯಾವುದೇ ಜಮೀನು ಇರುವುದಿಲ್ಲ. ಎಫ್‌ಐಆರ್‌ ಹಾಗೂ ಮರಣೋತ್ತರ ವರದಿ ಇಲ್ಲ. ಮೃತನ ಹೆಸರಿನಲ್ಲಿ ಅಲ್ಪ ಪ್ರಮಾಣದ ಸಾಲ ಇದ್ದು ಬ್ಯಾಂಕಿನಿಂದ ಯಾವುದೇ ನೋಟಿಸ್‌ ಬಂದಿಲ್ಲ....

ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ತಿರಸ್ಕರಿಸಲು ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯ ಸಮಿತಿ ನೀಡಿರುವ ಕಾರಣಗಳು.

ರಾಜ್ಯದಲ್ಲಿ ಜೆಡಿಎಸ್‌–ಕಾಂಗ್ರೆಸ್ ಮೈತ್ರಿ ಸರ್ಕಾರ ಬಂದ ಬಳಿಕ ಇಲ್ಲಿಯವರೆಗೆ 462 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, 256 ಪ್ರಕರಣಗಳಲ್ಲಿ ಪರಿಹಾರ ವಿತರಿಸಲಾಗಿದೆ. ಪ್ರತಿ ಕುಟುಂಬಕ್ಕೆ ₹5 ಲಕ್ಷದಂತೆ ಒಟ್ಟು ₹12.80 ಕೋಟಿ ಪರಿಹಾರ ಕೊಡಲಾಗಿದೆ.

ತಂದೆ ತಾಯಿ ಹೆಸರಿನಲ್ಲಿ ಜಮೀನು ಇದ್ದರೂ ಆತ್ಮಹತ್ಯೆ ಮಾಡಿಕೊಂಡ ಸಂದರ್ಭದಲ್ಲಿ ಮೃತ ರೈತರ ಕುಟುಂಬಕ್ಕೆ ಪರಿಹಾರ ನೀಡಲಾಗುತ್ತದೆ ಎಂದು ಸರ್ಕಾರ ಈ ಹಿಂದೆ ಪ್ರಕಟಿಸಿತ್ತು. ಈ ಸಲ ಅಂತಹ ಪ್ರಕರಣಗಳನ್ನು ತಿರಸ್ಕರಿಸಲಾಗಿದೆ. ಅಂತಹ ಪ್ರಕರಣಗಳ ಸಂಖ್ಯೆ 20ಕ್ಕಿಂತ ಹೆಚ್ಚು ಇದೆ.

ಸಾಂಸಾರಿಕ ಹಾಗೂ ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೃಷಿ ಕೈ ಸಾಲ ಪಡೆದಿದ್ದು, ಅದು ಸಹ ಕೃಷಿ ಉದ್ದೇಶಕ್ಕೆ ಅಲ್ಲ. ಬ್ಯಾಂಕ್‌ ಸಾಲ ಅಲ್ಲದ ಕಾರಣಕ್ಕೆ ಅರ್ಜಿ ತಿರಸ್ಕರಿಸಲಾಗಿದೆ. ಕೃಷಿಕ ತನ್ನ ಸಾವಿಗೆ ತಾನೇ ಕಾರಣ ಎಂದು ತಿಳಿಸಿದ್ದಾರೆ. ಸಾವಿಗೆ ಬೆಳೆ ಹಾನಿ ಕಾರಣ ಅಲ್ಲ. ಈ ರೈತನ ಸಾಲ ಚಾಲ್ತಿ ಸಾಲವಾಗಿದ್ದು, ಇದು ಬೆಳೆ ಸಾಲ ಮನ್ನಾ ವ್ಯಾಪ್ತಿಗೆ ಒಳಪಟ್ಟಿದೆ. ಇವರಿಗೆ ಬ್ಯಾಂಕಿನಿಂದ ಯಾವುದೇ ನೋಟಿಸ್‌ ಬಂದಿಲ್ಲ. ಮೃತರು ವೈಯಕ್ತಿಕ ಕಾರಣದಿಂದ ಮಾನಸಿಕ ಅಸ್ವಸ್ಥರಾಗಿ ಜೀವನದಲ್ಲಿ ಜಿಗುಪ್ಸೆಗೆ ಒಳಗಾಗಿ ಸಾವಿಗೆ ಶರಣಾಗಿದ್ದಾರೆ... ಹೀಗೆಂದು ಕೆಲವು ಪ್ರಕರಣಗಳಲ್ಲಿ ಕಾರಣಗಳನ್ನು ಉಲ್ಲೇಖಿಸಲಾಗಿದೆ.

ಬಿಜೆಪಿ ಸದಸ್ಯರ ಗದ್ದಲದ ನಡುವೆ ವಿಧಾನಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಕೆ.ಜಿ.ಬೋಪಯ್ಯ ಅವರ ಲಿಖಿತ ‍ಪ್ರಶ್ನೆಗೆ ಕೃಷಿ ಸಚಿವ ಎನ್‌.ಎಚ್‌.ಶಿವಶಂಕರ ರೆಡ್ಡಿ ಉತ್ತರ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT