ಶನಿವಾರ, ಮಾರ್ಚ್ 6, 2021
31 °C

49 ತಾಲ್ಲೂಕು ಈಗಲೂ ಬರಪೀಡಿತ: ಸಚಿವ ಆರ್. ಅಶೋಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವ ಕಾರಣಕ್ಕೆ ಬರ ಪೀಡಿತ ಎಂದು ಘೋಷಿತವಾಗಿರುವ 49 ತಾಲ್ಲೂಕುಗಳಿಗೆ ಇನ್ನೂ ಒಂದು ತಿಂಗಳು ಇದೇ ಹಣೆ ಪಟ್ಟಿ ಸಿಗಲಿದೆ.

ಗುರುವಾರ ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ ಅವರು, ಈ ತಾಲ್ಲೂಕುಗಳಲ್ಲಿ ಮುಂಗಾರು ಪೂರ್ವ ಮಳೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಇನ್ನೊಂದು ತಿಂಗಳ ಅವಧಿಗೆ ಬರ ಪೀಡಿತ ಘೋಷಣೆ ಹೊರಡಿಸಲಾಗಿದೆ ಎಂದರು.

ಈ ಘೋಷಣೆಯಿಂದಾಗಿ ಇಲ್ಲಿ ಕುಡಿಯುವ ನೀರು ಪೂರೈಕೆ, ಬರ ಕಾಮಗಾರಿ ಮುಂದುವರಿಸಲು ಸಾಧ್ಯವಾಗುತ್ತದೆ. ಇಲ್ಲವಾದರೆ, ಇವತ್ತಿಗೆ ಎಲ್ಲ ಕಾರ್ಯಗಳೂ ನಿಂತು ಹೋಗುತ್ತವೆ. ನಾಳೆಯಿಂದ ಕಾಮಗಾರಿಗಳು ಮುಂದುವರಿಯಬೇಕು ಎಂಬ ಕಾರಣಕ್ಕೆ ಈ ಆದೇಶ ಹೊರಡಿಸಲಾಗುವುದು ಎಂದರು.

ಬೆಂಗಳೂರಿನಲ್ಲಿ ಕೆಲವು ದಿನಗಳಿಂದ ಮಳೆ ಬಂದು ಹಾನಿಯಾಗಿದೆ. ಮುಂಗಾರು ಮಳೆ ಆರಂಭವಾಗುವುದರೊಳಗೆ ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳಲಾಗುವುದು ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು