ಮಂಗಳವಾರ, ಜೂನ್ 2, 2020
27 °C

ನಿಜಾಮುದ್ದೀನ್ ಜಮಾತ್‌ ಮಸೀದಿಗೆ ತೆರಳಿದ್ದರು ರಾಜ್ಯದ 54 ಜನ: ಶ್ರೀರಾಮುಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ಭಾಗವಹಿಸಿದ 26 ವ್ಯಕ್ತಿಗಳು ಬೀದರ್ ಜಿಲ್ಲೆಗೆ ಸೇರಿದವರಾಗಿದ್ದು, ಅವರನ್ನು ಈ ಕೂಡಲೇ ಕ್ವಾರಂಟೈನ್‌ ಮಾಡಲಾಗಿದೆ. ಉಳಿದವರ ಪತ್ತೆ ಹಚ್ಚುವ ಕಾರ್ಯವನ್ನು ಮುಂದುವರಿಸಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಂದವರ ಸಂಖ್ಯೆ 54 ಎಂಬುದು ಖಚಿತವಾಗಿದೆ. ಇವರು ಬೆಂಗಳೂರು, ಬೀದರ್, ಗುಲ್ಬರ್ಗ, ಬಳ್ಳಾರಿ ಭಾಗದವರು ಎಂದು ತಿಳಿದು ಬಂದಿದೆ. ಈಗಾಗಲೇ 13 ಜನರನ್ನು ಪತ್ತೆ ಹಚ್ಚಿ ಅವರನ್ನು ಕ್ವಾರಂಟೈನ್‌ನಲ್ಲಿಡಲಾಗಿದೆ ಎಂದಿದ್ದಾರೆ. 

ಕೋವಿಡ್-19 ಸೋಂಕು ತಪಾಸಣೆಗಾಗಿ ಕಫ ಪರೀಕ್ಷೆ ನಡೆಸಿದ್ದು, ಈಗ ವರದಿ ಋಣಾತ್ಮಕವಾಗಿದೆ. ಇದು ಸಮಾಧಾನದ ಸಂಗತಿ. ಉಳಿದವರನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು