6 ತಿಂಗಳಲ್ಲಿ ಬಿಜೆಪಿ ಸರ್ಕಾರ– ಉಮೇಶ ಕತ್ತಿ ಭವಿಷ್ಯ

7

6 ತಿಂಗಳಲ್ಲಿ ಬಿಜೆಪಿ ಸರ್ಕಾರ– ಉಮೇಶ ಕತ್ತಿ ಭವಿಷ್ಯ

Published:
Updated:

ಸಂಕೇಶ್ವರ: ರಾಜ್ಯದ ಜೆಡಿಎಸ್‌– ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ 6 ತಿಂಗಳೊಳಗಾಗಿ ಬಿದ್ದು ಹೋಗಲಿದ್ದು, ಬಿಜೆಪಿ ಸರ್ಕಾರ ಪುನಃ ಅಸ್ತಿತ್ವಕ್ಕೆ ಬರಲಿದೆ. ಬಿ.ಎಸ್‌.ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಶಾಸಕ ಉಮೇಶ ಕತ್ತಿ ಸೋಮವಾರ ಭವಿಷ್ಯ ನುಡಿದರು.

‘ಬಿಜೆಪಿಯ ಕೆಲವು ಶಾಸಕರು ನಮ್ಮ ಸಂಪರ್ಕದಲಿದ್ದಾರೆ’ ಎಂದು ಇತ್ತೀಚೆಗೆ ಸಚಿವ ರಮೇಶ ಜಾರಕಿಹೋಳಿ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದ ಯಾವೊಬ್ಬ ಬಿಜೆಪಿ ಶಾಸಕರೂ ಕಾಂಗ್ರೆಸ್‌ ಸೇರುವುದಿಲ್ಲ. ಜೆಡಿಎಸ್‌– ಕಾಂಗ್ರೆಸ್‌ ಆಂತರಿಕ ಕಚ್ಚಾಟದಲ್ಲಿ ಮುಳುಗಿದ್ದು, ಇನ್ನೂ ಟೇಕ್ ಆಫ್ ಆಗಿಲ್ಲ. ಇದರಿಂದ ಜನರಿಗೆ ಭ್ರಮನಿರಸವಾಗಿದೆ ಎಂದು ಹೇಳಿದರು.

ರೈತರ ಎಲ್ಲ ರೀತಿಯ ಸಾಲ ಮನ್ನಾ ಮಾಡುವುದಾಗಿ ಚುನಾವಣೆ ವೇಳೆ ಭರವಸೆ ನೀಡಿದ್ದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಈಗ ಬೆಳೆ ಸಾಲ ಮಾತ್ರ ಮನ್ನಾ ಮಾಡುವುದಾಗಿ ಹೇಳುತ್ತಿದ್ದಾರೆ. ತಾವೇ ನೀಡಿದ ಆಶ್ವಾಸನೆಯಿಂದ ಹಿಂದಕ್ಕೆ ಸರಿಯುತ್ತಿದ್ದಾರೆ ಎಂದು ಟೀಕಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !