ಸ್ವಾಯತ್ತ ಸಂಸ್ಥೆಗಳಲ್ಲಿ ಕೇಂದ್ರದ ಹಸ್ತಕ್ಷೇಪ

7

ಸ್ವಾಯತ್ತ ಸಂಸ್ಥೆಗಳಲ್ಲಿ ಕೇಂದ್ರದ ಹಸ್ತಕ್ಷೇಪ

Published:
Updated:
Deccan Herald

ಚಿಕ್ಕಬಳ್ಳಾಪುರ: ‘ಇತ್ತೀಚಿನ ವಿದ್ಯಮಾನಗಳನ್ನು ಗಮನಿಸಿದಾಗ ಸ್ವಾಯತ್ತ ಸಂಸ್ಥೆಗಳಲ್ಲಿ ಕೇಂದ್ರ ಸರ್ಕಾರದ ಹಸ್ತಕ್ಷೇಪ ಹೆಚ್ಚಾಗುತ್ತಿದೆ. ಸ್ವಾಯತ್ತ ಸಂಸ್ಥೆಗಳಲ್ಲಿ ಸರ್ಕಾರಗಳು ಅನಗತ್ಯ ಮಧ್ಯಪ್ರವೇಶಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸಡಿಲಗೊಳಿಸುತ್ತದೆ’ ಎಂದು ಕೃಷಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ಹೇಳಿದರು.

ನಗರದಲ್ಲಿ ಗುರುವಾರ ನಡೆದ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನದ ಅಡಿ ಚುನಾವಣಾ ಆಯೋಗ, ಯೋಜನಾ ಆಯೋಗ, ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ), ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) ಸೇರಿದಂತೆ ಅನೇಕ ಸ್ವಾಯತ್ತ ಸಂಸ್ಥೆಗಳನ್ನು ರಚಿಸಲಾಗಿದೆ. ಇವುಗಳಲ್ಲಿ ಯಾವುದೇ ರೀತಿ ಸರ್ಕಾರದ ಹಸ್ತಕ್ಷೇಪ ಸಲ್ಲದು’ ಎಂದು ತಿಳಿಸಿದರು.

‘ಸ್ವಾಯತ್ತ ಸಂಸ್ಥೆಗಳ ಸ್ವಾಯತ್ತತೆ, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಯಾವುದೇ ಶಕ್ತಿಗಳು ಇರಬಹುದು, ದೇಶದ ಸ್ವಾತಂತ್ರ್ಯಕ್ಕೆ, ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತಂದಾಗ ಪ್ರತಿಯೊಬ್ಬ ಪ್ರಜೆಗಳು ಸಂರಕ್ಷಿಸುವ ಕೆಲಸ ಮಾಡಬೇಕು. ದೇಶದ ಐಕ್ಯತೆ ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !